ಮುಂಬೈ: ಕೋವಿಡ್ ಸಾಂಕ್ರಾಮಿಕ ಉಲ್ಬಣದ ಮಧ್ಯೆಯೇ ಬ್ಲ್ಯಾಕ್ ಫಂಗಸ್ ಸೋಂಕು ಹಾವಳಿಯೂ ಉಲ್ಬಣಗೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಕಪ್ಪು ಶಿಲೀಂಧ್ರ (ಮ್ಯೂಕೋರ್ಮೈಕೋಸಿಸ್ ) ಸೋಂಕಿಗೆ 52 ಜನರು ಮೃತಪಟ್ಟಿದ್ದಾರೆ. ಕರ್ನಾಟಕದ ಮೈಸೂರಿನಲ್ಲಿಯೂ ಇಬ್ಬರಿಗೆ ಈ ಕಪ್ಪು ಶಿಲಿಂಧ್ರ ರೋಗ ಕಾಣಿಸಿಕೊಂಡಿದೆ. ಇದು ಹೆಚ್ಚಾಗಿ ಕೊರೊನಾದಿಂದ ದೀರ್ಘಕಾಲದಿಂದ ಬಳಲುವವರಿಗೆ ಕಾಣಿಸಿಕೊಳ್ಳುತ್ತಿದೆ.
ಹೆಚ್ಚು ಕಾಲ ಆಸ್ಪತ್ರೆಗಳಲ್ಲಿ ಉಳಿಯುವ ಕೋವಿಡ್ ಸೋಂಕಿತರು ಹಾಗೂ ಸೋಂಕಿನಿಂದ ಗುಣಮುಖರಾಗಿ ಮಲೀನ ಪರಿಸರದಲ್ಲಿ ವಾಸ ಮಾಡುವ ದುರ್ಬಲರಿಗೆ ಈ ಫಂಗಸ್ ಸೋಂಕು ಸಾಧ್ಯತೆ ಹೆಚ್ಚಿರುತ್ತದೆ ಎಂದು ಹೇಳಲಾಗಿದೆ. ಮಹಾರಾಷ್ಟ್ರದಲ್ಲಿಕಪ್ಪು ಶಿಲಿಂಧ್ರ ಪ್ರಕರಣಗಳು ಹೆಚ್ಚಗುತ್ತಿದ್ದು, ಈ ವರೆಗೂ 52 ಮಂದಿ ಮೃತಪಟ್ಟಿದ್ದಾರೆಂದು ವರದಿಯಾಗಿದೆ.
ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರಲ್ಲಿಯೇ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ತೀವ್ರ ಜ್ವರ, ಕಣ್ಣಿನ ನೋವು, ಮೂಗು ಕಟ್ಟುವುದು, ಕಣ್ಣಿನ ದೃಷ್ಠಿ ಭಾಗಶಃ ಮಂದವಾಗುವ ಲಕ್ಷಣಗಳು ಕಂಡುಬಂದಿವೆ.
ಮಹಾರಾಷ್ಟ್ರದಲ್ಲಿ ಕಪ್ಪು ಶಿಲಿMಧ್ರದಿಂದ ಮೃತಪಟ್ಟ 52 ಜನರೂ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡರಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಇದರ ಉಲ್ಬಣ ಜಾಸ್ತಿಯಾಗುತ್ತಿರುವುದಕ್ಕೆ ಈಗ ಮಹಾರಾಷ್ಟ್ರ ಆರೋಗ್ಯ ಸಚಿವಾಲಯ ಈ ಕಪ್ಪು ಶಿಲೀಂಧ್ರದಿಂದ ಮೃತಪಟ್ಟವರ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ನೀಡಲು ಆರಂಭಿಸಿದೆ.
ಬುಧವಾರವಷ್ಟೇ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ, ಮಹಾರಾಷ್ಟ್ರದಲ್ಲಿ 1,500 ಜನರಲ್ಲಿ ಕಪ್ಪು ಶೀಲಿಂಧ್ರದ ಸೋಖು ಕಾಣಿಸಿಕೊಂಡಿದ್ದು,ಇದು ಕೊರೋನಾ 2ನೇ ಅಲೆಯಲ್ಲಿ ತೀವ್ರಗೊಂಡಿದೆ ಎಂದು ತಿಳಿಸಿದ್ದಾರೆ.
ಕಪ್ಪು ಶಿಲೀಂದ್ರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಗುಲಿದವರ ಚಿಕಿತ್ಸೆಗೆ ಬಹುಶಿಸ್ತೀಯ ವಿಧಾನದ ಅಗತ್ಯವಿರುತ್ತದೆ, ಇದರಿಂದ ಆರೋಗ್ಯದ ಮೂಲಸೌಕರ್ಯಗಳ ಮೇಲೆ ಮತ್ತಷ್ಟು ಹೊರೆ ಬೀಳುವ ಸಾಧ್ಯತೆಗಳಿವೆ.


ನಿಮ್ಮ ಕಾಮೆಂಟ್ ಬರೆಯಿರಿ