ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ ಹಾಗೂ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ (65) ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಈ ಹಿನ್ನೆಲೆಮುಖ್ಯಮಂತ್ರಿ ಯಡಿಯೂರಪ್ಪ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ‘ ಮಹದೇವ್ ಪ್ರಕಾಶ್ ನಿಧನದ ಸುದ್ದಿ ಕೇಳಿ ಆಘಾತವಾಯಿತು, ಅವರು ನನ್ನ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ’ ಎಂದು ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿನಿಂದಾಗಿ, ನಾರಾಯಣ ಹೃದಯಾಲಯಕ್ಕೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ನಿಧನರಾಗಿದ್ದಾರೆ.
ಮಹದೇವ್ ಪ್ರಕಾಶ್, ಈ ಭಾನುವಾರ ಎಂಬ ಪತ್ರಿಕೆಯ ಸಂಪಾದಕರಾಗಿಯೂ ಕೆಲಸ ಮಾಡುತ್ತಿದ್ದರು. ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿಯೂ ಕೆಲಸ ಮಾಡಿದ್ದರು. ರಾಜ್ಯದಲ್ಲಿ ರಾಜಕೀಯ ವಿಶ್ಲೇಷಕರಾಗಿ ಹೆಸರು ಮಾಡಿದ್ದರು..


ನಿಮ್ಮ ಕಾಮೆಂಟ್ ಬರೆಯಿರಿ