ಕೋಲಾರದ ಮಾಲೂರಿನಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕೆ ಘಟಕ

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಬಯೋಟೆಕ್‌ನಿಂದ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಸ್ಥಾಪನೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ರಾಜಧಾನಿಗೆ ಹತ್ತಿರದಲ್ಲೇ ಇರುವ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಘಟಕ ಬರುತ್ತಿದೆ. ಅಲ್ಲಿಯೂ ಲಸಿಕೆ ತಯಾರಾಗಲಿದೆ. ಈಗಾಗಲೇ ಸರಕಾರ ಎಲ್ಲ ಒಪ್ಪಿಗೆ ನೀಡಿದೆ. ಆಡಳಿತಾತ್ಮಕ ಕೆಲಸಗಳನ್ನು ಕಂಪನಿ ಪೂರ್ಣ ಮಾಡುತ್ತಿದ್ದು, ಸಿವಿಲ್ ಕಾಮಗಾರಿಗಳು ಶುರುವಾಗಿವೆ. ಅವು ತ್ವರಿತವಾಗಿ ಮುಗಿದು ಶೀಘ್ರವೇ ಲಸಿಕೆ ತಯಾರಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.
ಕೋವಿಶೀಲ್ಡ್ ತಯಾರಿಸುವ ಎಸ್‌ಐಐ ಮಾತ್ರವಲ್ಲದೆ, ಯಾವುದೇ ಲಸಿಕೆ ತಯಾರಿಕೆ ಕಂಪನಿ ರಾಜ್ಯದಲ್ಲಿ ಘಟಕ ಸ್ಥಾಪಿಸಲು ಮುಂದಾದರೂ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
100 ಹಾಸಿಗೆಗಳ ಆಸ್ಪತ್ರೆ:
ರಾಜ್ಯದಲ್ಲಿ ಸಂಭನೀಯ ಮೂರನೇ ಅಲೆ ಎದುರಿಸಲು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ವೈದ್ಯಕೀಯ ಮೂಲಸೌಕರ್ಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಕನಿಷ್ಠ 100 ಹಾಸಿಗೆಗಳ ಆಸ್ಪತ್ರೆ ಇರಲೇಬೇಕು. ಅದರಲ್ಲಿ ಆಮ್ಲಜನಕ ಮತ್ತು ಐಸಿಯು ಹಾಸಿಗೆಗಳೂ ಅಲ್ಲಿ ಇರಬೇಕು. ಈ ಬಗ್ಗೆ ವ್ಯವಸ್ಥೆಗೆ ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದರು.
ನೀತಿ ಆಯೋಗ ಈಗಾಗಲೇ ತಿಳಿಸಿರುವಂತೆ ಅಗಸ್ಟ್ ತಿಂಗಳಲ್ಲಿ 40 ಕೋಟಿ ಡೋಸ್ ಲಸಿಕೆ ದೇಶದಲ್ಲಿ ಉತ್ಪಾದನೆ ಆಗಲಿದೆ. ಇದು ಆಶಾದಾಯಕ ಬೆಳವಣಿಗೆ. ಜೂನ್-ಜುಲೈ ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ತಯಾರಾಗಲಿದೆ. ಇದುವರೆಗೂ ದೇಶದಲ್ಲಿ 19 ಕೋಟಿ ಡೋಸ್ ಲಸಿಕೆ ಕೊಡಲಾಗಿದೆ ಎಂದ ಅವರು ಈವರೆಗೆ ಎಲ್ಲ ಮೂಲಗಳಿಂದ ಬಂದಿರುವ ನೆರವಿನ ಪ್ರಮಾಣವನ್ನು ತಿಳಿಸಲಾಗುವುದು ಎಂದರು.

ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement