ಗ್ರಾಮೀಣ ಭಾಗಕ್ಕೂ ಹಬ್ಬುತ್ತಿದೆ ಕೊರೊನಾ, ಜಾಗರೂಕರಾಗಿರಿ: ಮೋದಿ

ನವ ದೆಹಲಿ: ಗ್ರಾಮೀಣ ಭಾಗಕ್ಕೂ ಕೊರೊನಾ ಸೋಂಕು ಹರಡುತ್ತಿದ್ದು, ಗ್ರಾಮೀಣ ಭಾಗದವರ ಜಾಗರೂಕರಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
ಕೊರೊನಾದಿಂದ ಕನಿಷ್ಠ 2.6 ಲಕ್ಷ ಜನರು ಮೃತಪಟ್ಟಿದ್ದು, ಈ ಮಹಾಮಾರಿಯಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು, ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮೋದಿ ಕರೆ ನೀಡಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತಿದೆ. ಕೋವಿಡ್ ನಿಂದ ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ರಕ್ಷಿಸಲು ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಮಾಸ್ಕ್ ಗಳನ್ನು ಸರಿಯಾಗಿ ಮತ್ತು ನಿಯಮಿತವಾಗಿ ಧರಿಸುವುದು ಮುಖ್ಯ ಎಂದು ಮೋದಿ ಎಚ್ಚರಿಸಿದ್ದಾರೆ.
ಶೀತ ಮತ್ತು ಜ್ವರದಂತಹ ಕೋವಿಡ್ ರೋಗ ಲಕ್ಷಣಗಳನ್ನು ಲಘುವಾಗಿ ತೆಗೆದುಕೊಳ್ಳಬೇಡಿ ರೈತರಿಗೆ ಮನವಿ ಮಾಡಿದ ಪ್ರಧಾನಿ, ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೈನ್ ಆಗಿ ಮತ್ತು ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ರೈತರ ಖಾತೆಗಳಿಗೆ ಪಿಎಂ ಕಿಸಾನ್ 8ನೇ ಕಂತಿನ ಹಣ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಹೊಸ ಆಸ್ಪತ್ರೆಗಳು ಮತ್ತು ಆಮ್ಲಜನಕವನ್ನು ಉತ್ಪಾದಿಸುವ ಸ್ಥಾವರಗಳನ್ನು ಸ್ಥಾಪಿಸುತ್ತಿದೆ ಮತ್ತು ಔಷಧಿಗಳು ಮತ್ತು ಲಸಿಕೆಗಳ ಪೂರೈಕೆಯನ್ನು ಹೆಚ್ಚಿಸುತ್ತಿದೆ. ಸರ್ಕಾರ ಈ ಸಾಂಕ್ರಾಮಿಕದ ಎರಡನೇ ಅಲೆಯ ಉಲ್ಬಣದಲ್ಲಿ ಎಲ್ಲ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ಔಷಧಿಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯುವಂತೆ ರಾಜ್ಯಗಳಿಗೆ ಸೂಚಿಸಿದ ಪ್ರಧಾನಿ, ಈ ಸಾಂಕ್ರಾಮಿಕವು ಹಳ್ಳಿಗಳಲ್ಲಿ ವೇಗವಾಗಿ ಹರಡುತ್ತಿದೆ. ಇದನ್ನು ತಡೆಯಲು ಪ್ರತಿಯೊಂದು ರಾಜ್ಯ ಸರ್ಕಾರವೂ ಪ್ರಯತ್ನಿಸಬೇಕು. ಗ್ರಾಮೀಣ ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಇದರಲ್ಲಿ ಸ್ಥಳೀಯ ಸಂಸ್ಥೆಗಳ ಬಹಳ ಮುಖ್ಯ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಯುಪಿಐನಲ್ಲಿ ₹2,000ಕ್ಕಿಂತ ಹೆಚ್ಚಿನ ಹಣ ಪಾವತಿಗೆ ಶೇ. 0.4ರಷ್ಟು ಶುಲ್ಕ ; ಇದು ಯಾರಿಗೆ ಅನ್ವಯ, ಯಾರಿಗೆ ಎಂದಿನಂತೆ ಫ್ರೀ?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement