ಕೊರೊನಾದಿಂದ ಬಂಗಾಳ ಸಿಎಂ ಮಮತಾ ಕಿರಿಯ ಸಹೋದರನ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಆಸೀಮ್‌ ಬ್ಯಾನರ್ಜಿಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಶನಿವಾರ ವರದಿಯಾಗಿದೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಆಸೀಮ್‌ ಬ್ಯಾನರ್ಜಿ ಅವರು ಸುಮಾರುಒಂದು ತಿಂಗಳಿಂದ ಕೋಲ್ಕತಾದ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಕೊನೆಯುಸಿರೆಳೆದಿದ್ದಾರೆಂದು ವರದಿಯಾಗಿದೆ.

ಈ ನಡುವೆ ಶುಕ್ರವಾರ ಒಂದೇ ದಿನ ಪಶ್ಚಿಮ ಬಂಗಾಳದಲ್ಲಿ 20,846 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,94,802ಕ್ಕೆ ಏರಿಕೆಯಾಗಿದೆ. ಈ ನಡುವೆ 24 ಗಂಟೆಗಳಲ್ಲಿ ರಾಜ್ಯದಲ್ಲಿ 136 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 12,993ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಯುಪಿಐನಲ್ಲಿ ₹2,000ಕ್ಕಿಂತ ಹೆಚ್ಚಿನ ಹಣ ಪಾವತಿಗೆ ಶೇ. 0.4ರಷ್ಟು ಶುಲ್ಕ ; ಇದು ಯಾರಿಗೆ ಅನ್ವಯ, ಯಾರಿಗೆ ಎಂದಿನಂತೆ ಫ್ರೀ?

ನಿಮ್ಮ ಕಾಮೆಂಟ್ ಬರೆಯಿರಿ

advertisement