ಗವಿಮಠ ಕೋವಿಡ್-19 ಆಸ್ಪತ್ರೆಗೆ ಸಚಿವ ಬಿ.ಸಿ.ಪಾಟೀಲ ಭೇಟಿ : ಶ್ರೀಗಳ ಸೇವೆಗೆ ಶ್ಲಾಘನೆ

ಕೊಪ್ಪಳ: ಇಲ್ಲಿನ ಗವಿಮಠ ಕೋವಿಡ್ ಆಸ್ಪತ್ರೆಗೆ ರಾಜ್ಯ ಕೃಷಿ ಸಚಿವ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ   ಶನಿವಾರ ಭೇಟಿ ನೀಡಿದರು. ಹಾಗೂ ಶ್ರೀಗಳ ಸೇವೆಯನ್ನು ಶ್ಲಾಘಿಸಿದರು.
ಜಿಲ್ಲೆಯ ಕೊರೋನಾ ಸೋಂಕಿತರ ಚಿಕಿತ್ಸೆಗೆ ನೆರವಾಗಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ  ಗವಿಸಿದ್ಧೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ  ಇವುಗಳ ಸಹಯೋಗದಲ್ಲಿ ಶ್ರೀ ಗವಿಮಠದ ಯಾತ್ರಿ ನಿವಾಸದಲ್ಲಿ ನಿರ್ಮಾಣಗೊಂಡ 100 ಆಮ್ಲಜನಕ ಬೆಡ್‌ಗಳಿರುವ ಗವಿಮಠ ಕೋವಿಡ್ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಶನಿವಾರ ವೀಕ್ಷಣೆ ಮಾಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.  ನಂತರ ಅಲ್ಲಿಂದ ಗವಿಮಠಕ್ಕೆ ತೆರಳಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ ಸುರಳ್ಕರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಎಸ್‌ಪಿ ಟಿ.ಶ್ರೀಧರ್ ಮೊದಲಾದವರಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement