ತೌಕ್ಟೆ ಚಂಡಮಾರುತ: ದಕ್ಷಿಣ ಕನ್ನಡ, ಕೊಡಗಿನಲ್ಲಿ ಭಾರಿ ಮಳೆ…

ಮಂಗಳೂರು/ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ತೌಕ್ಟೆ ಚಂಡಮಾರುತದ ಪರಿಣಾಮದಿಂದ ಕೇರಳದಲ ಕೆಲವು ಜಿಲ್ಲೆಗಳಲ್ಲಿ ಗುರುವಾರ ರಾತ್ರಯಿಂದಲೇ ಆರಂಭವಾಗಿದ್ದು ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗಿನಲ್ಲಿಯೂ ಭರ್ಜರಿ ಮಳೆ ಆರಂಭವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದಲೇ ಮಳೆ ಆರಂಭವಾಗಿದ್ದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಜಿಲ್ಲೆಗಳಲ್ಲಿ ಎರಡು ದಿನಗಳಲ್ಲಿ 20 ಸೆಂ ಮೀ ಗಿಂತಲೂ ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಶುಕ್ರವಾರ ರಾತ್ರಿಯಿಂದಲೇ ಮಳೆಯಾಗುತ್ತಿದೆ. ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಮೇ 15) ಮತ್ತು ನಾಳೆ (ಮೇ 16) ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಶಿವಮೊಗ್ಗ ನಗರದ ಸುತ್ತಮುತ್ತ ತುಂತುರು ಮಳೆಯಾಗಿದೆ. ಬೆಳಿಗ್ಗೆಯಿಂದ ಮೊಡ ಕವಿದ ವಾತಾವರಣವಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇನ್ನು ಕಾಫಿನಾಡು ಚಿಕ್ಕಮಗಳೂರಿನಲ್ಲೂ ಚಂಡಮಾರುತದ ಎಫೆಕ್ಟ್​ನಿಂದ ತುಂತುರು ಮಳೆಯಾಗಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ಇಲ್ಲೂ ಕೂಡಾ 2 ದಿನ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಲೆನಾಡು ಭಾಗದ ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಕೊಡಗು ಜಿಲ್ಲೆಯಲ್ಲೂ ಗಾಳಿ ಸಹಿತ ಮಳೆ ಆರಂಭವಾಗಿದ್ದು, ಜಿಲ್ಲೆಯಾಧ್ಯಂತ ಶುಕ್ರವಾರ ರಾತ್ರಿಯಿಂದ ಮಳೆ ಸುರಿಯುತ್ತಿದೆ, ಈಗಾಗಲೇ ಹವಾಮಾನ ಇಲಾಖೆಯಿಂದ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜನರಿಗೆ ಸೂಚನೆ ನೀಡಲಾಗಿದೆ. ಮೈಸೂರು, ಮಂಡ್ಯ ಹಾಗೂ ಹಾಸನದಲ್ಲಿಯೂ ಜಿಟಿಜಿಟಿ ಮಳೆಯಾಗುತ್ತಿದೆ.
ಕೇರಳದಲ್ಲಿ ಇಬ್ಬರ ಸಾವು: ಕೇರಳದಲ್ಲಿ ಕರಾವಳಿ ಪ್ರದೇಶಗಳಲ್ಲಿನ ಅನೇಕ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಕೆಲವೆಡೆ ಚಂಡಮಾರುತದ ಮಳೆಯಿಂದ ಮನೆಗಳುಹಾನಿಗೀಡಾಗಿವೆ.ಶುಕ್ರವಾರ ತೀವ್ರ ಮಳೆಗೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement