ತೌಕ್ಟೆ ಚಂಡಮಾರುತ: ಸಮುದ್ರಕ್ಕೆ ಇಳಿದ 7 ಜನ ನಾಪತ್ತೆ, ಇಬ್ಬರು ಪಾರು

ಉಡುಪಿ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ತೌಕ್ತೆ ಚಂಡಮಾರುತದ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿದೆ. ಇ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದು ಅವರಲ್ಲಿ 7 ಮಂದಿ ನಾಪತ್ತೆಯಾಗಿದ್ದಾರೆ. ಇಬ್ಬರು ಮೊಮಿರುಲ್ ಮುಲ್ಲಾ( 34), ಕರೀಮುಲ್ಲಾ ಶೇಕ್ (24) ಎಂಬುವರು ಟ್ಯೂಬ್​ನಲ್ಲಿ ಈಜಿಕೊಂಡು ಬಂದು ಜೀವ ಉಳಿಸಿಕೊಂಡಿದ್ದಾರೆ.
ಇಬ್ಬರೂ ಉಡುಪಿಯ ಮಟ್ಟುಕೊಪ್ಲ ಎಂಬಲ್ಲಿ ದಡ ಸೇರಿದ್ದಾರೆ. ಇನ್ನುಳಿದ ಏಳು ಮಂದಿಗಾಗಿ ಸಮುದ್ರದಲ್ಲಿ ಕೋಸ್ಟಲ್​ ಗಾರ್ಡ್​ ಹುಡುಕಾಟ ನಡೆಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement