ಅರಬ್ಬೀ ಸಮುದ್ರದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ನೌಕಾಸೇನೆ ಹೆಲಿಕಾಪ್ಟರ್​​ ಬಳಕೆಗೆ ತಯಾರಿ

ಕಾರವಾರ: ಅರಬ್ಬೀ ಸಮುದ್ರದಲ್ಲಿ ತೌಕ್ಟೆ ಚಂಡಮಾರತಕ್ಕೆ ಸಿಲುಕಿರುವ 9 ಮಂದಿ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಭಾರೀ ಅಲೆಗಳ ಕಾರಣದಿಂದ ಕೋಸ್ಟ್ ಗಾರ್ಡ್ ಕಾರ್ಯಾಚರಣೆ ವಿಳಂಬವಾಗುತ್ತಿದ್ದು, ನೌಕಾ ಸೇನೆಯ ಹೆಲಿಕಾಪ್ಟರ್ ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕಾರವಾರದ ಕದಂಬ ನೌಕಾ ನೆಲೆಯಿಂದ ಮಂಗಳೂರಿನ ಕಡಲ ತೀರಕ್ಕೆ ಹೆಲಿಕಾಪ್ಟರ್ ಗಳು ಹಾರಲಿದ್ದು, ಒಂಭತ್ತು ಕಾರ್ಮಿಕರ ರಕ್ಷಣೆಗೆ ನೌಕಾ ಸೇನೆ ಮುಂದಾಗಿದೆ.
ರಾಜ್ಯ ಸರ್ಕಾರದ ಮನವಿಯಂತೆ ಕಾರವಾರದಿಂದ ನೌಕಾ ಸೇನೆಯ ಹೆಲಿಕಾಪ್ಟರ್ ಗಳು ಮಂಗಳೂರಿನ ಕಡಲ ತೀರಕ್ಕೆ ಬರಲಿವೆ. ಹವಾಮಾನ ತಿಳಿಯಾದ ತಕ್ಷಣ ಹೆಲಿಕಾಪ್ಟರ್ ಮೂಲಕ ಕಾರ್ಮಿಕರ ರಕ್ಷಣೆ ಮಾಡಲಿದೆ. ಕಾಪು ಕಡಲ ಕಿನಾರೆಯಿಂದ 15 ನಾಟಿಕಲ್ ಮೈಲ್ ದೂರದಲ್ಲಿ ಕೋರಮಂಡಲ್ ಎಂಬ ಟಗ್ ನಲ್ಲಿ ಒಂಭತ್ತು ಕಾರ್ಮಿಕರು ಸಿಲುಕಿದ್ದು ಕಲ್ಲಿನ ನಡುವೆ ನಿಂತಿದೆ. ಅಟ್ಲಾಂಟಿಕ್ ಶಿಫ್ಟಿಂಗ್ ಕಂಪೆನಿ ಮಾಲಿಕತ್ವದ ಟಗ್ ಇದಾಗಿದೆ. ಎಂ.ಆರ್.ಪಿ.ಎಲ್ ಈ ಟಗ್ ಗೆ ನೀಡಿದ ಗುತ್ತಿಗೆಯ ಅವಧಿ ಮುಗಿದಿದ್ದು ಆದರೂ ಸಮುದ್ರದಲ್ಲೇ ಲಂಗರು ಹಾಕಿದ್ದವು.
ಅಲಾಯನ್ಸ್ ಎಂಬ ಇನ್ನೊಂದು ಟಗ್ ಈಗಾಗಲೇ ಕಡಲಿನಲ್ಲಿ ಮುಳಗಿದ್ದು,ಟಗ್ ಅವಶೇಷಗಳು ಪಡುಬಿದ್ರೆ ಕಡಲ ಕಿನಾರೆಯಲ್ಲಿ ಗೋಚರವಾಗಿದೆ. ಈ ಟಗ್ ನಲ್ಲಿ ಎಂಟು ಮಂದಿ ಕಾರ್ಮಿಕರಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಮೂರು ಮಂದಿ ಈಜಿಕೊಂಡೇ ದಡ ಸೇರಿದ್ದು, ಮೂವರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಯನ್ನು ಕೋಸ್ಟ್ ಗಾರ್ಡ್ ಮತ್ತು ತಟರಕ್ಷಣಾ ಪಡೆ ಮಾಡುತ್ತಿದ್ದಾರೆ.

ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement