ತೌಕ್ಟೆ ಚಂಡಮಾರುತ: ಬಾಧಿತ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಬಿಎಸ್‌ವೈ

ಬೆಂಗಳೂರು: ತೌಕ್ಟೆ ಚಂಡಮಾರುತದಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಉಂಟಾಗಿರುವ ಭಾರೀ ಮಳೆ ಹಾಗೂ ಅನಾಹುತದ ‌ಮುಖ್ಯಮಂತ್ರಿ ಯಡಿಯೂರಪ್ಪ ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗು ಉಸ್ತುವಾರಿ ಸಚಿವರಿಂದ ವಿವರಗಳನ್ನು ಪಡೆದಿದ್ದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ
ಕೋವಿಡ್ ನಿಯಂತ್ರಣ ಕಾರ್ಯಗಳ ಜೊತೆಗೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ‌ ನೀಡಬೇಕು. ಪರಿಹಾರ ಹಾಗು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಸರ್ಕಾರದಿಂದ ಯಾವುದೇ ತುರ್ತು ನೆರವು ಬೇಕಿದ್ದರೂ ಸಂಬಂಧಪಟ್ಟ ಸಚಿವರುಗಳಿಗೆ ಅಥವಾ ತಮಗೆ ನೇರವಾಗಿ ಕರೆ ಮಾಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಕರ್ನಾಟಕದ ಕರಾವಳಿಯ ಪ್ರದೇಶಗಳಲ್ಲಿನ ಚಂಡಮಾರುತದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇನೆ. ಜೀವ ರಕ್ಷಣೆ ಮತ್ತು ತುರ್ತು ಪರಿಹಾರ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ನಾನು ಸಂತ್ರಸ್ತ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಡಿಸಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಸಾಧ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳು ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement