ಬೆಂಗಳೂರು: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಪರೀಕ್ಷೆಗಳನ್ನು ರದ್ದುಪಡಿಸಲಾಗುತ್ತಿದೆ ಎಂಬ ವರದಿಗಳು ಊಹಾ-ಪೋಹದ್ದು ಎಂದು ಶಿಕ್ಷಣ ಸಚಿವ ಸುರೇಶ್ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಸೋಂಕಿನ ತೀವ್ರ ಪ್ರಸರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯವನ್ನು ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ವಿಚಲಿತರಾಗದೆ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ