ತೌಕ್ಟೆ ಚಂಡಮಾರುತ: ಮಹಾರಾಷ್ಟ್ರದಲ್ಲಿ 12 ಸಾವಿರ ಜನರ ಸ್ಥಳಾಂತರ

ಮುಂಬೈ: ಮಹಾರಾಷ್ಟ್ರದಲ್ಲೂ ತೌಕ್ಟೆ ಚಂಡಮಾರುತ ದೊಡ್ಡ ಅವಾಂತರ ಸೃಷ್ಟಿಸಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಮುಂಬೈ, ಥಾಣೆ ಮತ್ತು ಇತರೆ ಕರಾವಳಿ ಪ್ರದೇಶಗಳಲ್ಲಿ ಪರಿಸ್ಥಿತಿ ಪರಿಶೀಲಿಸಿದರು.
ಅಧಿಕೃತ ಹೇಳಿಕೆಯ ಪ್ರಕಾರ, ರಾಯಗಡದಲ್ಲಿ 3380 ರತ್ನಗಿರಿ ಜಿಲ್ಲೆಯಲ್ಲಿ 3896 ಹಾಗೂ ಸಿಂಧುದುರ್ಗ್ ದಲ್ಲಿ 144 ಮಂದಿ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ 12,420 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಚಂಡಮಾರುತದಿಂದಾಗಿ ಈ ಪ್ರದೇಶದ ಕೋವಿಡ್ ರೋಗಿಗಳ ಚಿಕಿತ್ಸೆಗೆ ಪರಿಣಾಮ ಬೀರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಯಗಡ್ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದ್ದು, ಮುಂಬೈ, ಥಾಣೆ ಮತ್ತು ಪಾಲ್ಘರ್ ಗೆ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಏತನ್ಮಧ್ಯೆ, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಪತ್ತು ನಿರ್ವಹಣಾ ಕೋಶಕ್ಕೆ ಭೇಟಿ ನೀಡಿ, ಪರಿಹಾರ ಕಾರ್ಯಗಳ ಸಂಗ್ರಹವನ್ನು ಪರಿಶೀಲಿಸಿದರು.
ಅಲ್ಲದೆ ರಾಜ್ಯದ ಎಲ್ಲಾ ಕರಾವಳಿ ಜಿಲ್ಲೆಗಳ ಆಡಳಿತ ಜಾಗರೂಕರಾಗಿರವಂತೆ ಸೂಚಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement