ಬಂಧಿತ ವೈಎಸ್‌ಆರ್‌ ಕಾಂಗ್ರೆಸ್ ಬಂಡಾಯ ಸಂಸದ ರಾಜು ವೈದ್ಯಕೀಯ ಪರೀಕ್ಷೆಗೆ ‘ಸುಪ್ರೀಂ’ ಅಸ್ತು

ವಿಜಯವಾಡ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ(ಸಿಐಡಿ)ಯಿಂದ ಬಂಧಿಸಲ್ಪಟ್ಟಿರುವ ವೈಎಸ್‌ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ ರಘುರಾಮ ಕೃಷ್ಣಂ ರಾಜು ಅವರ ವೈದ್ಯಕೀಯ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.
ಜಾಮೀನು ನಿರಾಕರಿಸಿದ ಆಂಧ್ರ ಪ್ರದೇಶದ ಹೈಕೋರ್ಟ್ ಆದೇಶದ ವಿರುದ್ಧ ಸಂಸದರು ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಸರನ್ ಮತ್ತು ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರನ್ನೊಳಗೊಂಡ ಪೀಠ, ಕೆ ರಘುರಾಮ ಕೃಷ್ಣಂ ರಾಜು ಅವರಿಗೆ ನೆರೆಯ ತೆಲಂಗಾಣದ ಸಿಕಂದರಾಬಾದ್ ಸೇನಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಸಮ್ಮತಿ ಸೂಚಿಸಿದೆ.
ಅವರನ್ನು ನ್ಯಾಯಾಂಗ ಬಂಧನದಲ್ಲಿಯೇ ಸಿಕಂದರಾಬಾದ್‌ನ ಸೇನಾ ಆಸ್ಪತ್ರೆಗೆ ಪರೀಕ್ಷೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಬೇಕು..
ಪರೀಕ್ಷೆಯ ಸಮಯದಲ್ಲಿ ಅರ್ಜಿದಾರರೊಂದಿಗೆ ಇರಬೇಕಾದ ನ್ಯಾಯಾಂಗ ಅಧಿಕಾರಿಯನ್ನು ತೆಲಂಗಾಣ ಹೈಕೋರ್ಟ್ ನಾಮನಿರ್ದೇಶನ ಮಾಡುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.
ರಘು ರಾಮ ಕೃಷ್ಣಂ ರಾಜು ಅವರು ಈ ಹಿಂದೆ ಪೊಲೀಸರು ತಮಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆಂಧ್ರ ಪ್ರದೇಶ ಹೈಕೋರ್ಟ್‌ಗೆ ತಿಳಿಸಿದ್ದರು.

ಪ್ರಮುಖ ಸುದ್ದಿ :-   ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement