ಬ್ಲ್ಯಾಕ್‌ ಫಂಗಸ್‌ ಚಿಕಿತ್ಸೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ

ಬೆಂಗಳೂರು:ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಚಿಕಿತ್ಸೆಗೆ ರಾಜ್ಯ ಸರ್ಕಾರವು ಮಾರ್ಗಸೂಚಿದ್ದು ಬಿಡುಗಡೆ ಮಾಡಿದೆ. ಹಾಗೂ ಕರ್ನಾಟಕ ಯಾವ್ಯಾವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದೆ ಎಂಬುದನ್ನೂ ತಿಳಿಸಿದೆ.
ಬ್ಲ್ಯಾಕ್ ಫಂಗಸ್ ಇರುವವರಿಗೆ 12-14 ದಿನ ಚಿಕಿತ್ಸೆ ನೀಡಬೇಕು, ರಾಜ್ಯದ ಪ್ರಮುಖ ಆರು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ ನೀಡಲಾಗಿದೆ, ಬೆಂಗಳೂರು ನಗರದಲ್ಲಿ ಬೆಂಗಳೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆ, ಹುಬ್ಬಳ್ಳಿಯಲ್ಲಿ ಕಿಮ್ಸ್, ಶಿವಮೊಗ್ಗದ ಮೆಡಿಕಲ್ ಕಾಲೇಜು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಕಲಬುರಗಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಅವಕಾಶ ನೀಡಲಾಗಿದೆ. ಅಲ್ಲದೆ ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆ, ಮಿಂಟೋ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಬ್ಲ್ಯಾಕ್ ಫಂಗಸ್ ಎನ್ನುವುದು ಸಾಂಕ್ರಾಮಿಕ ಸೋಂಕಲ್ಲ, ಫಂಗಸ್ ಎಂಬುದು ಗಾಳಿಯಲ್ಲಿ ಇರುತ್ತದೆ, ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೆ ದಾಳಿ ನಡೆಸುತ್ತದೆ.ಇದು ಮೊದಲಿಗೆ ಕಣ್ಣಿನ ಮೇಲೆ ಪ್ರಭಾವ ಬೀರುತ್ತದೆ, ಬಳಿಕ ಮೂಗಿನ ಮೂಲಕ ಮೆದುಳನ್ನು ಸೇರುತ್ತದೆ. ಹೀಗಾಗಿ ಆರಂಭದಿಂದಲೇ ಎಚ್ಚರವಹಿಸಬೇಕಿದೆ.
ಮಧೂಮೇಹ ಕಾಯಿಲೆ, ಎಚ್‌ಐವಿ, ಕ್ಯಾನ್ಸರ್ ಪೀಡಿತರು, ಅಂಗಾಂಗ ಕಸಿ ಮಾಡಿಸಿಕೊಂಡವರಿಗೆ ಸೋಂಕು ತಗುಲುವ ಸಾಧ್ಯತೆ ಇದೆ, ಕೊರೊನಾದಿಂದ ಗುಣಮುಖರಾದ ಬಳಿಕ ಕಿವಿ, ಮೂಗು, ಕಣ್ಣು ತಪಾಸಣೆ ಮಾಡಿಸಿಕೊಳ್ಳಲು ಸಲಹೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement