ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಉಲ್ಬಣದ ಮಧ್ಯೆಯೇ ಸೋಂಕು ನಿಯಂತ್ರಿಸಲು ಪರಿಣಾಮಕಾರಿಯಾಗಿರುವ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳಿಗೆಕೊರತ ಉಂಟಾಗಿದೆ. ಇದರ ಬೆನ್ನಲ್ಲೇ ಬಹುನಿರೀಕ್ಷಿತ ರಷ್ಯಾದ ಸ್ಫುಟ್ನಿಕ್ ವಿ ಲಸಿಕೆ ಮೇ ಅಂತ್ಯ ಅಥವಾ ಜೂನ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಸಿಗುವ ನಿರೀಕ್ಷೆ ಇದೆ.
ಈ ಸಂಬಂಧ ಅಪೋಲೋ ಆಸ್ಪತ್ರೆ ಸಮೂಹ ಹಾಗೂ ಡಾ. ರೆಡ್ಡೀಸ್ ಲ್ಯಾಬ್ ಸೋಮವಾರ ಒಪ್ಪಂದ ಮಾಡಿಕೊಂಡಿದ್ದು, ಶೀಘ್ರದಲ್ಲೇ ಬೆಂಗಳೂರಿನಲ್ಲಿರುವ ಎಲ್ಲ ಅಪೋಲೋ ಆಸ್ಪತ್ರೆಗಳಲ್ಲೂ ೀ ಲಸಿಕೆ ಲಭ್ಯವಾಗಲಿದೆ. ಲಸಿಕೆಯ ದರ 1,200 -1,250 ರೂ. ನಿಗದಿ ಮಾಡಬಹುದು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಲಸಿಕೆ ಸಂಗ್ರಹಣೆ, ಸಾರಿಗೆ, ಆಡಳಿತ ಮತ್ತು ಮೇಲ್ವಿಚಾರಣೆಗಾಗಿ ಡಿಆರ್‌ಎಲ್ ಅಪೊಲೊವನ್ನು ಅವಲಂಬಿಸಿದೆ. ಪ್ರಾಯೋಗಿಕ ಭಾಗವಾಗಿ ರಷ್ಯಾದ ಡಿಆರ್‌ಎಲ್’ನಿಂದ 1.5 ಲಕ್ಷ ಲಸಿಕೆಗಳು ಶೀಘ್ರದಲ್ಲೇ ಬೆಂಗಳೂರಿಗೆ ಬರಲಿದೆ ಎಂದು ಆಪೋಲೋ ಆಸ್ಪತ್ರೆಯ ಹಿರಿಯ ವೈದ್ಯರು ಹೇಳಿದ್ದಾರೆ ಎಂದು ವರದಿ ಹೇಳಿದೆ.
ಅಪೋಲೋ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಸಂಗೀತಾ ರೆಡ್ಡಿ, ತಿಂಗಳಲ್ಲಿ 10 ಲಕ್ಷ ಲಸಿಕೆಗಳು ಲಭ್ಯವಾಗಲಿದೆ. ರೆಡ್ಡೀಸ್ ಲ್ಯಾಬೊರೇಟರಿ ಜೊತೆಗೆ ಅಪೊಲೊ ಆಸ್ಪತ್ರೆಯು ಸಹಯೋಗ ಹೊಂದಿರುವುದಕ್ಕೆ ಒಂದು ತಿಂಗಳಲ್ಲಿ 10 ಲಕ್ಷ ಡೋಸ್ ಲಸಿಕೆ ಲಭ್ಯವಾಗಲಿದೆ ಎಂದು ಹೇಳಿದ್ದಾರೆ. ಅದು ಮೇ ಕೊನೆಯಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ಲಭ್ಯವಾಗಬಹುದು ಎಂದು ನಿರೀಕ್ಷಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ