ಬೆಂಗಳೂರು: ಕೊರೊನಾ ಲಸಿಕೆಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವೈದ್ಯೆಯೊಬ್ಬರು ಸಿಕ್ಕಿಬಿದ್ದಿದ್ದಾರೆ,
ವೈದ್ಯೆ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಪುಷ್ಪಿತಾ (25) ಹಾಗೂ ಈಕೆಗೆ ಸಹಕರಿಸುತ್ತಿದ್ದ ಪ್ರೇಮಾ (34) ಅವರು ಬಂಧಿತ ಆರೋಪಿಗಳು.
ಮಂಜುನಾಥ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಪುಷ್ಪಿತಾ, ಪ್ರೇಮಾ ಏ. 23ರಿಂದ ಈ ಅಕ್ರಮ ವ್ಯವಹಾರ ಮಾಡುತ್ತಿದ್ದರು ಎನ್ನಲಾಗಿದೆ. ಪಿಎಚ್ಸಿಗೆ ಬರುತ್ತಿದ್ದ ಲಸಿಕೆಯನ್ನು ಕದ್ದು ಪ್ರೇಮಾ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡುತ್ತಿದ್ದ ಪುಷ್ಪಿತಾ, ಬಳಿಕ ಅದನ್ನು ಒಂದಕ್ಕೆ 500 ರೂ.ಗಳಂತೆ ಮಾರುತ್ತಿದ್ದರು ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ.
ಫೋನ್ ಮೂಲಕ ವ್ಯಾಕ್ಸಿನ್ ಬುಕಿಂಗ್ ಮಾಡುತ್ತಿದ್ದರು ಎಂದು ವರದಿಯಾಗಿದೆ.
ಮಾಹಿತಿ ಪಡೆದ ಅನ್ನಪೂರ್ಣೇಶ್ವರಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಇನ್ಸ್ಪೆಕ್ಟರ್ ಲೋಹಿತ್ ಲಸಿಕೆ ಪಡೆಯುವ ನೆಪದಲ್ಲಿ ತೆರಳಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳಿಂದ ಒಂದು ವ್ಯಾಕ್ಸಿನ್ ಕ್ಯಾರಿಯರ್, ಬಳಸಿದ ಹಾಗೂ ಬಳಸದ ಸಿರಿಂಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ