ಭಾರತದಲ್ಲಿ ಕೊರೊನಾ ಹೊಸ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು..

ನವ ದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಿಂದ ತತ್ತರಿಸಿದ ಭಾರತದಲ್ಲಿ ಮಹಾಮಾರಿ ಕೊಂಚ ನಿಯಂತ್ರಣಕ್ಕೆ ಬಂದಿದೆ. ದೇಶದಲ್ಲಿ ಹೊಸ ಸೋಂಕಿತ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,76,070 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,69,077 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಕೊರೊನಾ ಸೋಂಕಿಗೆ ಒಂದು ದಿನದಲ್ಲಿ 3,874 ಮಂದಿ ಮೃತಪಟ್ಟಿದ್ದಾರೆ.
ಭಾರತದಲ್ಲಿ ಕೊರೊ ಸೋಂಕಿತ ಪತ್ತೆಗೆ ತಪಾಸಣೆ ವೇಗ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 20,55,010 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 32,23,56,187 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹ್ಯಾರಿಯರ್ ಕಾರು, ನಕಲಿ ಎನ್‌ಎಸ್‌ಜಿ ಕಮಾಂಡೋಗಳು ! ಸೇನೆಯ ಬ್ರಿಗೇಡಿಯರ್ ಸೋಗಿನಲ್ಲಿ ಓಡಾಡುತ್ತಿದ್ದ ಯುವಕ ಬಲೆಗೆ ಬಿದ್ದಿದ್ದೇ ರೋಚಕ

ನಿಮ್ಮ ಕಾಮೆಂಟ್ ಬರೆಯಿರಿ

advertisement