ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಮಹತ್ವದ ಸೂಚನೆ.. ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಗಡುವು ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ

ನವ ದೆಹಲಿ: 2020-21ನೇ ಸಾಲಿನ ಹಣಕಾಸು ವರ್ಷದ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ಕೇಂದ್ರ ಸರ್ಕಾರ ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಿದೆ.
ಹಾಗೂ ಕೇಂದ್ರೀಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ಕಂಪೆನಿಗಳಿಗೆ ಐಟಿಆರ್ ಸಲ್ಲಿಸುವ ಗಡುವನ್ನು ನವೆಂಬರ್ 30 ರ ವರೆಗೆ ವಿಸ್ತರಿಸಿದೆ.
ಆದಾಯ ತೆರಿಗೆ ಕಾನೂನಿನ ಪ್ರಕಾರ, ಲೆಕ್ಕಪರಿಶೋಧನೆಯ ಅಗತ್ಯವಿಲ್ಲದ ಮತ್ತು ಸಾಮಾನ್ಯವಾಗಿ ಐಟಿಆರ್ -1 ಅಥವಾ ಐಟಿಆರ್ -4 ಬಳಸಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ವ್ಯಕ್ತಿಗಳಿಗೆ ಐಟಿಆರ್ ಸಲ್ಲಿಸಲು ಅಂತಿಮ ದಿನಾಂಕ ಜುಲೈ 31 ಆಗಿತ್ತು. ಅದನ್ನು ಈಗ ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ.
ಕಂಪನಿಗಳು ಅಥವಾ ಸಂಸ್ಥೆಗಳ ತೆರಿಗೆ ಪಾವತಿದಾರರಿಗೆ ಆಡಿಟ್ ಮಾಡಬೇಕಾದ ಗಡುವು ಅಕ್ಟೋಬರ್ 31 ಆಗಿತ್ತು. ಅದನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ.
ತೀವ್ರವಾದ ಕೋವಿಡ್‌ ಸಾಂಕ್ರಾಮಿಕ ರೋಗದ ಉಲ್ಬಣದ ಹಿನ್ನೆಲೆಯಲ್ಲಿ ಕೆಲವು ತೆರಿಗೆ ಅನುಸರಣೆಗಾಗಿ ಸಮಯ ಮಿತಿಗಳ ವಿಸ್ತರಣೆಯನ್ನು ನೀಡಲಾಗುತ್ತಿದೆ ಎಂದು ಸುತ್ತೋಲೆಯಲ್ಲಿ ಸಿಬಿಡಿಟಿ ತಿಳಿಸಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement