ಭಾರತದಲ್ಲಿ ಇಳಿಮುಖವಗುತ್ತಿರುವ ದೈನಂದಿನ ಕೊರೊನಾ ಸೋಂಕು..ಆದರೆ ಕಡಿಮೆಯಾಗದ ಸಾವಿನ ಸಂಖ್ಯೆ

ನವದೆಹಲಿ: ಭಾರತದಾದ್ಯಂತ ಕೊರೋನಾ ಎರಡನೇ ಅಲೆಯ ಅಬ್ಬರ ಮುಂದುವರಿದಿದೆ, ಕಳೆದ 24 ಗಂಟೆಗಳ ಅವಧಿಯಲ್ಲಿ 2.57 ಲಕ್ಷಕ್ಕೂ ಅಧಿಕ ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದೇ ಸಮಸಯದಲ್ಲಿ 4,194 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,57,299 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ ಇದುವರೆಗೆ 2,62,89,290ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,57,630 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,30,70,365ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 29,23,400 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಂತೆಯೇ ಇದೇ ಸಮಯದಲ್ಲಿ 4,194 ಸೋಂಕಿತರು ಮೃತಪಟ್ಟಿದ್ದರಿಂದ ಸೋಂಕಿಗೆ ಮೃತಪಟ್ಟವರ ಒಟ್ಟು ಸಂಖ್ಯೆ ದೇಶದಲ್ಲಿ 2,95,525ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 20,66,285 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 32,64,84,155ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿ

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement