ಕರ್ನಾಟಕದಲ್ಲಿ ಹೊಸ ಸೋಂಕಿತರಿಗಿಂತ ದುಪ್ಪಟ್ಟು ಆಸ್ಪತ್ರೆಯಿಂದ ಬಿಡುಗಡೆ, ಆದರೆ ಕಡಿಮೆಯಾಗದ ಸಾವಿನ ಸಂಖ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ತಾಸಿನಲ್ಲಿ ಹೊಸದಾಗಿ 31,183 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದೇ ಸಮಯದಲ್ಲಿ 61,766 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಇದೇ ಸಮಯದಲ್ಲಿ 451 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,98,925 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ 24,658 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 4,83,204 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ ದಿನ 61,766 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 18,91,042 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರಿನಲ್ಲಿ 200 ಮಂದಿ ಸೋಂಕಿತರು ಮೃತಪಟ್ಟಿದ್ದು 8214 ಜನರಿಗೆ ಸೋಂಕು ತಗುಲಿದೆ. 2,61,115 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

22-05-2021 HMB Kannada (1)

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement