ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬ್ಲ್ಯಾಕ್ ಫಂಗಸ್ ಸೋಂಕಿಗೆ ರಾಜ್ಯದ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ.
ಈ ಕುರಿತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಸ್ವತಃ ಟ್ವೀಟ್ ಮಾಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಗೆ ಉಚಿತ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಕೋವಿಡ್ ಹರಡುವುದನ್ನು ತಡೆಯಲು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನಹರಿಸಿ ಜಾಗರೂಕತೆಯಿಂದ ಇರಬೇಕು ಎಂದು ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ