ಕರ್ನಾಟಕದಲ್ಲಿ ಭಾನುವಾರ 626 ಕೊರೊನಾ ಸೋಂಕಿತರ ಸಾವು

ಬೆಂಗಳೂರು: ಕಳೆದ 24 ಗಂಟೆಯಲ್ಲಿ (ಭಾನುವಾರ) ಕರ್ನಾಟಕದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, 626 ಮಂದಿ ಮೃತಪಟ್ಟಿದ್ದಾರೆ..!
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸ ಸೋಂಕಿನ ಪ್ರಕರಣ 25,979 ವರದಿಯಾಗಿದ್ದು . ಇದರೊಂದಿಗೆ ಸೋಂಕಿತರ ಸಂಖ್ಯೆ 24,24,904ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು ಭಾನುವಾರ 35,573 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ಚೇತರಿಕೆ ಸಂಖ್ಯೆ 19,26,615ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಭಾನುವಾರ 7,494 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,19,552ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 362 ಮಂದಿ ಮೃತಪಟ್ಟಿದ್ದಾರೆ. ಇನ್ನು ರಾಜ್ಯದಲ್ಲಿ ಸಾವಿನ ಸಂಖ್ಯೆ 25,282 ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಜಿಲ್ಲಾವಾರು ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

23-05-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement