ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ:ಹಾವಾಮನ ಇಲಾಖೆ ಮುನ್ಸೂಚನೆ

ಬೆಂಗಳೂರು: ಭಾರತದ ಪೂರ್ವ ಕರಾವಳಿಯ ಬಂಗಾಳ ಕೊಲ್ಲಿಯಲ್ಲಿ ಬೀಸುವ ಯಾಸ್‌ ಚಂಡ ಮಾರುತದ ನೇರ ಪ್ರಭಾವ ಕರ್ನಾಕದ ಮೇಲೆ ಆಗದಿದ್ದರೂ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೇ 26ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾರದ ಹಿಂದೆ ತೌಕ್ಟೆ ಚಂಡಮಾರುತದ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದು ವಾರ ಧಾರಾಕಾರ ಮಳೆ ಸುರಿದಿತ್ತು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾನುವಾರ (ಮೇ 23) ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ‘ಯೆಲ್ಲೊ ಅಲರ್ಟ್‌’ ಮುಂದುವರಿಸಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಮೇ 25ರ ವರೆಗೆ ಮಳೆ ತಗ್ಗಲಿದೆ. ಆದರೆ,ಕೆಲವೆಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಬಹುದು. 26ರಿಂದ ಕರಾವಳಿ ಹಾಗೂ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಎರಡೂ ದಿನ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ’ ಎಂದು ಇಲಾಖೆ ಮಾಹಿತಿ ನೀಡಿದೆ.
ಜೂನ್‌ ಮೊದಲ ವಾರ ಮುಂಗಾರು: ‘ಜೂನ್‌ ಮೊದಲ ವಾರ ರಾಜ್ಯಕ್ಕೆ ನೈರುತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಈಗಿನ ಮಾಹಿತಿಯಂತೆ ನೈರುತ್ಯ ಮಾರುತಗಳು ಕೇರಳಕ್ಕೆ ಜೂನ್‌ 1ರಂದು ಪ್ರವೇಶಿಸಿದರೆ, ರಾಜ್ಯಕ್ಕೆ 5ರಂದು ಪ್ರವೇಶಿಸಬಹುದು. ಹಾಗಾಗಿ ಜೂನ್ ಆರಂಭದಲ್ಲೂ ಹೆಚ್ಚು ಮಳೆ ನಿರೀಕ್ಷಿಸಬಹುದು’ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement