ಕಮತಗಿ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯ ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘವು ಕೊರೊನಾದಿಂದ ತಮ್ಮ ಪೋಷಕರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ಬಂದಿದೆ.
ಕೊರೊನಾ ಸೋಂಕಿನಿಂದ ತಮ್ಮ ತಂದೆ-ತಾಯಿ ಕಳೆದುಕೊಂಡು ವಿದ್ಯಾರ್ಥಿಗಳ ಸಂಪೂರ್ಣ ವಿದ್ಯಾಭ್ಯಾಸವನ್ನು ನೋಡಿಕೊಳ್ಳುವುದಾಗಿ ಕಮತಗಿಯ ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘ ಪ್ರಕಟಿಸಿದೆ.
ಎಷ್ಟೋ ಮಕ್ಕಳು ಕೊರೊನಾ ಸೋಂಕಿಗೆ ಒಳಗಾದ ತಮ್ಮ ತಂದೆ-ತಾಯಿಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಅಂಥವರು ಯಾವುದೇ ಕಾರಣಕ್ಕೂಅಧೀರರಾಗುವುದು ಬೇಡ,.ಅವರು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಆಶಯ. ಈ ಕಾರಣಕ್ಕಾಗಿ ಹುಚ್ಚೇಶ್ವರ ವಿದ್ಯಾವರ್ಧಕ ಸಂಘವು ಅಂತಹ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿ ಹೊರುವ ನಿರ್ಧಾರ ತೆಗೆದುಕೊಂಡಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ