ಮೇ 26ರಂದು ಸಂಯುಕ್ತಾ ಕಿಸಾನ್ ಮೋರ್ಚಾದ ರಾಷ್ಟ್ರವ್ಯಾಪಿ ಪ್ರತಿಭಟನಾ ಕರೆಗೆ 12 ಪ್ರತಿಪಕ್ಷಗಳ ಬೆಂಬಲ

ನವ ದೆಹಲಿ: ಆರು ತಿಂಗಳಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನು ವಿರೋಧಿಸಿ ನಿರಂತರ ಹೋರಾಟ ನಡೆಸುತ್ತಿರವ ಸಂಯುಕ್ತ ಕಿಸಾನ್‌ ಮೋರ್ಚಾ ಮೇ 26ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು ಇದಕ್ಕೆ ದೇಶದ 12 ಪ್ರತಿಪಕ್ಷಗಳು ಬೆಂಬಲ ಸೂಚಿಸಿವೆ.
ಭಾನುವಾರ ಜಂಟಿ ಹೇಳಿಕೆಯಲ್ಲಿ, 12 ವಿರೋಧ ಪಕ್ಷಗಳ ನಾಯಕರು ಮೋರ್ಚಾ ಅವರ ಕರೆಯನ್ನು ಬೆಂಬಲಿಸಿದ್ದು, ಸಹಿ ಹಾಕಿದವರಲ್ಲಿ ಐದು ಮಂದಿ ಮುಖ್ಯಮಂತ್ರಿಗಳೂ ಇದ್ದಾರೆ.
ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆರು ತಿಂಗಳ ಆಂದೋಲನವನ್ನು ಗುರುತಿಸಲು 40 ರೈತ ಸಂಘಟನೆಗಳ ಒಕ್ಕೂಟವಾದ ಎಸ್‌ಕೆಎಂ ‘ಕಪ್ಪು ದಿನ’ ಕ್ಕೆ ಕರೆ ನೀಡಿತ್ತು.
ಶಾಂತಿಯುತ ಕಿಸಾನ್ ಹೋರಾಟದ ಆರು ತಿಂಗಳ ಪೂರ್ಣಗೊಂಡ ದಿನವನ್ನು ಗುರುತಿಸಿ ಮೇ 26 ರಂದು ದೇಶಾದ್ಯಂತ ಪ್ರತಿಭಟನಾ ದಿನವನ್ನು ಆಚರಿಸಲು ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ನೀಡಿದ ಕರೆಗೆ ನಾವು ನಮ್ಮ ಬೆಂಬಲವನ್ನು ನೀಡುತ್ತೇವೆ” ಎಂದು ವಿರೋಧ ಪಕ್ಷಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಜಂಟಿ ಹೇಳಿಕೆಯ ಸಹಿ ಮಾಡಿದವರು:
ಕಿಸಾನ್‌ ಸಂಯುಕ್ತ ಒಕ್ಕೂಟಕ್ಕೆ ಬೆಂಬಲ ಸೂಚಿಸಿ ಸಹಿ ಮಾಡಿದವರಲ್ಲಿ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (ಟಿಎಂಸಿ), ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (ಶಿವಸೇನೆ), ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (ಡಿಎಂಕೆ) ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ (ಜೆಎಂಎಂ) ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ (ಎನ್‌ಸಿ), ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ (ಎಸ್‌ಪಿ), ಆರ್‌ಜೆಡಿ ಪ್ರಮುಖ ತೇಜಸ್ವಿ ಯಾದವ್, ಸಿಪಿಐನ ಡಿ ರಾಜಾ ಮತ್ತು ಸಿಪಿಐ-ಎಂ ನ ಸೀತಾರಾಮ್ ಯೆಚೂರಿ ಇತರರು ಕೂಡ ಸಹಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

‘ಕೃಷಿ ಕಾನೂನುಗಳ ರದ್ದು ಮಾಡಿ, ಎಂಎಸ್‌ಪಿ ಕಾನೂನು ಖಾತರಿ’ ನೀಡಿ:
ಜಂಟಿ ಹೇಳಿಕೆಯು ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ. ಮೇ 12 ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿರೋಧ ಪಕ್ಷದ ನಾಯಕರು ಬರೆದ ಪತ್ರವನ್ನು ಉಲ್ಲೇಖಿಸಿ, ” ಸಾಂಕ್ರಾಮಿಕ ರೋಗಕ್ಕೆ ತುತ್ತಾಗುತ್ತಿರುವ ಲಕ್ಷಾಂತರ ಜನರನ್ನು ರಕ್ಷಿಸಲು” ಕೃಷಿ ಕಾನೂನುಗಳನ್ನು ಕೇಂದ್ರವು ರದ್ದುಪಡಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕೃಷಿ ಕಾನೂನುಗಳನ್ನು ತಕ್ಷಣ ರದ್ದುಪಡಿಸುವುದರ ಜೊತೆಗೆ, ಸ್ವಾಮಿನಾಥನ್ ಆಯೋಗದ ಶಿಫಾರಸು ಮಾಡಿದಂತೆ ಸಿ 2 + 50 ರಷ್ಟು ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ) ಗೆ ಕಾನೂನು ಖಾತರಿ ನೀಡಬೇಕೆಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರವು ಕೃಷಿ ತಿದ್ದುಪಡಿ ಕಾನೂನನ್ನು ರದ್ದುಪಡಿಸಬೇಕು ಮತ್ತು ತಕ್ಷಣವೇ ಈ ಮಾರ್ಗಗಳಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾ ಜೊತೆ ಮಾತುಕತೆ ಪುನರಾರಂಭಿಸಬೇಕು” ಎಂದು ಭಾನುವಾರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮೇ 26 ರಂದು ರೈತರು ನೀಡುವ ಕರೆ ಏನು..?
ಈ ತಿಂಗಳ ಆರಂಭದಲ್ಲಿ, ಸಮುಕ್ತಾ ಕಿಸಾನ್ ಮೋರ್ಚಾ ನಾಯಕ ಬಲ್ಬೀರ್ ಸಿಂಗ್ ರಾಜೇವಾಲ್ ಅವರು ಮೇ 26 ರಂದು ‘ಕಪ್ಪು ದಿನ’ ಆಚರಿಸಬೇಕೆಂದು ಕರೆ ನೀಡಿದ್ದರು.ಮೇ 26 ರಂದು ನಾವು ಈ ಪ್ರತಿಭಟನೆಯ ಆರು ತಿಂಗಳುಗಳನ್ನು ಪೂರ್ಣಗೊಳಿಸುತ್ತೇವೆ ಮತ್ತು ಪ್ರಧಾನಿ ಮೋದಿ ಸರ್ಕಾರ ರಚಿಸಿ ಏಳು ವರ್ಷಗಳಾಗಿವೆ. ಇದನ್ನು ನಾವು ಕಪ್ಪು ದಿನವೆಂದು ಆಚರಿಸುತ್ತೇವೆ” ಎಂದು ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ರಾಜೇವಾಲ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement