ಅಲೋಪಥಿ ಕುರಿತ ಆಕ್ಷೇಪಾರ್ಹ ಹೇಳಿಕೆ ಹಿಂಪಡೆದ ರಾಮ್ ದೇವ್

ನವ ದೆಹಲಿ: ಅಲೋಪಥಿ ಔಷಧಿ ಹಾಗೂ ಆಧುನಿಕ ವೈದ್ಯಕೀಯ ಚಿಕಿತ್ಸೆಯ ಕುರಿತು ತಾನು ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಯೋಗ ಗುರು ರಾಮ್ ದೇವ್ ಅವರು ಭಾನುವಾರ ಹೇಳಿದ್ದಾರೆ.
ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಆಧುನಿಕ ವೈದ್ಯಕೀಯ ಚಿಕಿತ್ಸೆಗಳಿಂದ ಹೆಚ್ಚಿನ ಜನರು ಮೃತಪಟ್ಟಿದ್ದಾರೆ ಎಂದು ರಾಮ್ ದೇವ್ ಹೇಳಿದ್ದರು. ಅವರ ಈ ಹೇಳಿಕೆ ಭಾರಿ ವಿವಾದ ಉಂಟು ಮಾಡಿದ ನಂತರ ಭಾರತೀಯ ವೈದ್ಯಕೀಯ ಸಂಘ ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಹರ್ಷವರ್ಧನ ಅವರಿಗೆ ಪತ್ರ ಬರೆದಿತ್ತು. ಆ ನಂತರ ಬಾಬಾ ರಾಮದೇವ ಅವರ ಹೇಳಿಕೆ ಖಂಡಸಿ ಹಾಗೂ ಅವರು ಹೇಈಕೆ ಹಿಂಪಡೆಯುವಂತೆ ಸೂಚಿಸಿ ಸಚಿವ ಹರ್ಷವರ್ಧನ ಪತ್ರ ಬರೆದಿದ್ದರು. ಪತ್ರ ಬರೆದ ನಂತರದಲ್ಲಿ ಬಾಬಾ ರಾಮದೇವ ತಮ್ಮ ಹೇಳಿಕೆ ಹಿಂಪಡೆದಿದ್ದಾರೆ.
ಡಾ. ಹರ್ಷ ವರ್ಧನ್ ಅವರೇ ತಮ್ಮ ಪತ್ರವನ್ನು ಸ್ವೀಕರಿಸಿದ್ದೇನೆ. ಆ ಸಂದರ್ಭದಲ್ಲಿ ಹಾಗೂ ವಿವಿಧ ಚಿಕಿತ್ಸೆಗಳ ಸಂಘರ್ಷದ ಬಗ್ಗೆ ಸಂಪೂರ್ಣ ವಿವಾದವನ್ನು ಕೊನೆಗೊಳಿಸುವೆ. ನಾನು ನನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ,
ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಅವರು ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡ ಕೆಲವೇ ಗಂಟೆಗಳ ನಂತರ ರಾಮ್ ದೇವ್ ಈ ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಯುಪಿಐನಲ್ಲಿ ₹2,000ಕ್ಕಿಂತ ಹೆಚ್ಚಿನ ಹಣ ಪಾವತಿಗೆ ಶೇ. 0.4ರಷ್ಟು ಶುಲ್ಕ ; ಇದು ಯಾರಿಗೆ ಅನ್ವಯ, ಯಾರಿಗೆ ಎಂದಿನಂತೆ ಫ್ರೀ?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement