ಕರ್ನಾಟಕದಲ್ಲಿ ಸೋಮವಾರ ಹೊಸ ಸೋಂಕಿತರಿಗಿಂತ ಚೇತರಿಸಿಕೊಂಡವರು ದುಪ್ಪಟ್ಟಿಗಿಂತ ಹೆಚ್ಚು

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 25,311 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 529 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 57,333 ಸೋಂಕಿತರು ಗುಣಮುಖಿತರಾಗಿದ್ದಾರೆ, ಈ ಮೂಲಕ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 1,98,3948ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 34,378 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 24,50,215ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 25,811ಕ್ಕೆ ಏರಿದೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4,40,435ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 5,701 ಸೋಂಕು ಪ್ರಕರಣಗಳು ವರದಿಯಾಗಿದ್ದು, 297 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಈ ಮೂಲಕ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,26,868ಕ್ಕೆ ಇಳಿಕೆಯಾಗಿದೆ.

ರಾಜ್ಯದ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

24-05-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement