ಮುಂದಿನ 15 ದಿನಗಳಲ್ಲಿ ಕರ್ನಾಟಕದಲ್ಲಿ ಹೊಸಮರಳು ನೀತಿ ಜಾರಿ: ನಿರಾಣಿ

ಮೈಸೂರು: ಹೊಸ ಮರಳು ನೀತಿ ಹಾಗೂ ಗಣಿ ನೀತಿಯು ಇನ್ನು 15 ದಿನದೊಳಗೆ ಜಾರಿಗೆ ಬರಲಿದೆ.ಈ ಸಂಬಂಧ ಕರಡು ಪ್ರತಿಯನ್ನು ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟವರಿಗೆ ಕಳುಹಿಸಲಾಗಿದ್ದು, ಈ ಕುರಿತು ವ್ಯಕ್ತವಾಗುವ ಅನಿಸಿಕೆ, ಅಭಿಪ್ರಾಯಗಳನ್ನು ಪಡೆದು ನೂತನ ಮರಳು ನೀತಿ ಹಾಗೂ ಗಣಿ ನೀತಿ ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಶೇ.30ರಷ್ಟು ಅನುದಾನ ಕೋವಿಡ್‌ಗೆ ಬಳಕೆ ಮಾಡಲಾಗುತ್ತದೆ ಎಂದು ನಿರಾಣಿ ಪ್ರಕಟಿಸಿದ್ದಾರೆ. ಶೇ.30ರಷ್ಟು ಹಣ ಬಳಸಿಕೊಳ್ಳಲು ಇಲಾಖೆಯ ಕಾಯ್ದೆಗಳಲ್ಲಿ ಅವಕಾಶ ಇದೆ. ಅದಕ್ಕಿಂತಲೂ ಹೆಚ್ಚಿನ ಹಣ ಅಗತ್ಯವಿದ್ದರೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅನುಮತಿ ಪಡೆದುಕೊಳ್ಳುತ್ತೇವೆ ಎಂದು ಮೈಸೂರಿನಲ್ಲಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಆಡಳಿತದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗುತ್ತಿದೆ. ಹೊಸ ಗಣಿ ನೀತಿ ತರಲಾಗುತ್ತಿದ್ದು, ತ್ವರಿತ ಕಾರ್ಯನಿರ್ವಹಣೆ ಹಾಗೂ ಸರಳೀಕರಣಕ್ಕಾಗಿ ಏಕಗವಾಕ್ಷಿ ವ್ಯವಸ್ಥೆ ಜಾರಿ ಮಾಡಲಾಗುತ್ತಿದೆ. ಇಲಾಖೆಯ ಅಧಿಕಾರಿಗಳಿಗೆ ಪೊಲೀಸರಂತೆ ಸಮವಸ್ತ್ರ, ಪ್ರತ್ಯೇಕ ವಾಹನ, ಮೈನಿಂಗ್‍ಗಳಿಗೆ ತೆರಳುವಾಗ ಸೆಕ್ಯೂರಿಟಿ ಗಾರ್ಡ್‍ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಮರಳನ್ನು ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಎತ್ತಿನ ಗಾಡಿಯಲ್ಲಿ ಸಣ್ಣ ಪ್ರಮಾಣದಲ್ಲಿ ಸ್ವಂತ ಬಳಕೆಗೆ ಸಾಗಿಸುವವರ ವಿರುದ್ಧ ಎಫ್.ಐ.ಆರ್ ದಾಖಲು ಮಾಡಬಾರದೆಂದು ಸೂಚಿಸಲಾಗಿದೆ. ಕೊಳ್ಳೇಗಾಲ ಭಾಗದಲ್ಲಿ ಇಂತಹ ಪ್ರಕರಣಗಳು ದಾಖಲಾಗಿರುವ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದಾರೆ. ಸ್ವಂತ ಬಳಕೆಗಾಗಿ ಮನೆ, ಅಭಿವೃದ್ಧಿ ನಿರ್ಮಾಣ ಕೆಲಸಗಳಿಗೆ ಸಣ್ಣ ಪ್ರಮಾಣದಲ್ಲಿ ಮರಳು ಸಾಗಿಸುವವರ ವಿರುದ್ಧ ಕ್ರಮಕೈಗೊಳ್ಳದಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ತಾಲೂಕಿನ ಮಲ್ಲಯ್ಯನಪುರದ ಬಳಿ ಸ್ವಾಭಾವಿಕ ಭೂವಿಜ್ಞಾನ ಸಂಗ್ರಹಾಲಯ ಸ್ಥಾಪನೆಗೆ ಯೋಗ್ಯವಾಗಿದ್ದು, ಈ ಸಂಬಂಧ ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಮುಂದಿನ ಪೀಳಿಗೆಗೆ ಇಲ್ಲಿನ ಗ್ರಾನೈಟ್ ಹಾಗೂ ಶಿಲೆಗಳ ವಿಶೇಷತೆಯ ಅಧ್ಯಯನ ಹಾಗೂ ಮಾಹಿತಿ ನೀಡುವಉದ್ದೇಶಕ್ಕಾಗಿ ಸ್ವಾಭಾವಿಕ ಭೂವಿಜ್ಞಾನ ಸಂಗ್ರಹಾಲಯ ಸ್ಥಾಪಿಸಲು ಮುಂದಾಗಿದ್ದು, ಈ ಸಂಭಂಧ ಮೌಖಿಕವಾಗಿ ಒಪ್ಪಿಗೆ ನೀಡಲಾಗಿದೆ ಎಂದರು.
ಕೇಂದ್ರದಿಂದಲೂ ಆಮ್ಲಜನಕದ ಕೊರತೆ ಇಲ್ಲ.. ಸಿಲಿಂಡರ್‌ಗಳ ಕೊರತೆಯಿಂದ ಸಮಸ್ಯೆಯಾಗುತ್ತಿದೆ ಎಂದು ಹೇಳಿದ ಅವರು ಕಲಬುರಗಿಯಲ್ಲಿ ಪ್ರತಿನಿತ್ಯ 500 ಕಂಟೇನರ್ ತಯಾರಿಸುವ ಕಾರ್ಯ ನಡೆಯುತ್ತಿದೆ. ಶೀಘ್ರವೇ ರಾಜ್ಯದಲ್ಲಿ ಆಮ್ಲನಕದ ಸಿಲಿಂಡರ್ ಗಳ ಕೊರತೆಯೂ ನೀಗಲಿದೆ ಎಂದರು.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement