ಕರ್ನಾಟಕದಲ್ಲಿ ಮೊದಲ ಡೋಸ್ ಪಡೆಯುವವರಿಗೆ ಕೋವ್ಯಾಕ್ಸಿನ್ ಲಸಿಕೆ ಸದ್ಯಕ್ಕಿಲ್ಲ..!

ಬೆಂಗಳೂರು; ಕರ್ನಾಟಕದಲ್ಲಿ ಕೋವ್ಯಾಕ್ಸಿನ್ ಕೊರತೆ ಉಂಟಾಗಿದ್ದು, ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದೆ ಎಂದು ಸರ್ಕಾರ ಹೇಳಿದೆ.
45 ವರ್ಷ ಮೇಲ್ಪಟ್ಟವರು ಲಸಿಕೆ ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಲಸಿಕೆ ಸಿಗಲಿದೆ. ಕೇಂದ್ರದಿಂದ ಲಸಿಕೆ ಬರಲು ತಡವಾಗಲಿದ್ದು, ಖಾಸಗಿ ಲಸಿಕಾ ಕೇಂದ್ರಗಳು ಕೂಡ 45 ವರ್ಷ ಮೇಲ್ಪಟ್ಟವರಗೆ ಲಸಿಕೆಯನ್ನು ನೀಡಿ ಎಂದು ಹೇಳಿದೆ.
ಕೇಂದ್ರ ಸರ್ಕಾರ ಕಾರ್ಖಾನೆಯಿಂದ ಲಸಿಕೆ ಲಸಿಕಾ ಕೇಂದ್ರಕ್ಕೆ ತಲುಪಲು 8ರಿಂದ 9 ದಿನಗಳು ಬೇಕಾಗುತ್ತವೆ, ಇವುಗಳ ಮಧ್ಯೆ ನಡೆಯುವ ಪ್ರಕ್ರಿಯೆಯಿಂದಾಗಿ ಲಸಿಕೆ ಸಿಗುವುದು ವಿಳಂಬವಾಗುತ್ತಿದೆ ಎಂದು ಹೇಳಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, ಎಲ್ಲಾ ಲಸಿಕೆಗಳು ಆರಂಭದಲ್ಲಿ ಕಾನೂನು‌ ಬದ್ಧ ಸ್ಥಿರತೆ ಮತ್ತು ಸ್ಟೆರಿಲಿಟಿ ಪರೀಕ್ಷೆಗಳನ್ನು ಮಾಡಬೇಕಾಗುತ್ತದೆ, ಅದಕ್ಕೆ ವಾರದ ಸಮಯ ಹಿಡಿಯುತ್ತದೆ. ನಂತರ ವಿಭಾಗಗಳನ್ನಾಗಿ ಮಾಡಿ ಪ್ರತಿ ಭಾಗವನ್ನು ಸೆಂಟ್ರಲ್ ಡ್ರಗ್ಸ್ ಲ್ಯೊಬೊರೇಟರಿಗೆ ಟೆಸ್ಟಿಂಗ್ ಗೆ ಕಳುಹಿಸಬೇಕಾಗುತ್ತದೆ, ಅದಕ್ಕೆ 1ರಿಂದ 2 ದಿನ ಸಮಯ ಹಿಡಿಯುತ್ತದೆ. ಫ್ಯಾಕ್ಟರಿಯಲ್ಲಿ ಉತ್ಪತ್ತಿಯಾದ ಲಸಿಕೆ ಲಸಿಕಾ ಕೇಂದ್ರಕ್ಕೆ ಬಂದು ತಲುಪಲು 8ರಿಂದ 9 ದಿನ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಈಗಿರುವ ಅಂಕಿಅಂಶ ಪ್ರಕಾರ, ಸೆರಂ ಇನ್ಸ್ ಟಿಟ್ಯೂಟ್ ಮತ್ತು ಭಾರತ್ ಬಯೋಟೆಕ್ ತಲಾ 6 ಮತ್ತು 2 ಕೋಟಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳನ್ನು ಉತ್ಪತ್ತಿ ಮಾಡುತ್ತಿದ್ದು, ಈ ತಿಂಗಳಾಂತ್ಯಕ್ಕೆ 5 ಕೋಟಿ ಲಸಿಕೆಗಳನ್ನು ಉತ್ಪಾದಿಸುವ ನಿರೀಕ್ಷೆಯಿದೆ.

ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement