ಕರ್ನಾಟಕದಲ್ಲಿ ಮಂಗಳವಾರ ದೈನಂದಿನ ಸೋಂಕು ಇಳಿಕೆ, ಆದರೆ ಸಾವು ಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ (ಮಂಗಳವಾರ) ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿದೆ, ಆದರೆ ಇದೇ ಸಮಯದಲ್ಲಿ ಮರಣ ಪ್ರಮಾಣ ಹಾಗಯೇ ಮುಂದುವರಿದೆ. ಮಂಗಳವಾರ ಒಂದೇ ದಿನ 588 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇದರೊಂದಿಗೆ ಸಾವಿನ ಸಂಖ್ಯೆ 26,399ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 22,758 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 24,72,973ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 38,224 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಸೋಂಕಿನಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 20,22,172ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ 4,24,381 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಮಂಗಳವಾರ 6,243 ಮಂದಿಗೆ ಸೋಂಕು ದೃಢಪಟ್ಟಿದ್ದು, ನಗರದಲ್ಲಿ ಸೋಂಕಿತರ ಸಂಖ್ಯೆ 11,31,496ಕ್ಕೆ ಏರಿಕೆಯಾಗಿದೆ. ] ಸೋಂಕಿಗೆ 350 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕರ್ನಾಟಕದ ಜಿಲ್ಲಾವಾರು ಕೊರೊನಾ ಸಂಪೂರ್ಣ ವಿವರಗಳನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

25-05-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement