ಬೆಳಗಾವಿಯಲ್ಲಿ ಮೇ 29ರಿಂದ ಎರಡು ದಿನ ಸಂಪೂರ್ಣ ಲಾಕ್ ಡೌನ್

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಮೇ 29 ಬೆಳಿಗ್ಗೆ 6ಗಂಟೆಯಿಂದ ಮೇ 31ರ ಬೆಳಿಗ್ಗೆ 6 ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಜಿ ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶ:
ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಹಾಗೂ ಅಂತರ್‌ರಾಜ್ಯ ಹಾಗೂ ಅಂತರ್ ಜಿಲ್ಲೆಗಳಿಗೆ ಸಂಚರಿಸುವ ಸರಕು ಮತ್ತು ಸಾಗಾಣಿಕಾ ವಾಹನಗಳಿಗೆ ಮಾತ್ರ ‌ಅವಕಾಶ ನೀಡಲಾಗಿದೆ.
ಆದೇಶದಲ್ಲಿ ಸೂಚಿಸಿರುವ ದಿನಗಳಂದು ಈಗಾಗಲೇ ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶವಿದೆ‌ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಸಂಪೂರ್ಣ ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾಗಿರುವ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement