ಬೆಂಗಳೂರು: ಬೆಂಗಳೂರು ನಗರದಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೇ 26ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳವಾರ ಸಂಜೆ 4 ಗಂಟೆ ವೇಳೆಗೆ ಬೆಂಗಳೂರು ನಗರದ ಕೆಲವು ಭಾಗದಲ್ಲಿ ಸಾಧಾರಣ ಮಳೆ ಸುರಿಯಿತು. ನಂತರ ವಿರಾಮ ನೀಡಿ. ಸಂಜೆ 5ರ ನಂತರ ಆರಂಭವಾಗಿದೆ. ಸತತ ಅರ್ಧಗಂಟೆಯಿಂದ ಬಿರುಸಿನಿಂದ ಮಳೆ ಸುರಿದಿದೆ.
ಜಯನಗರ, ಬಸವನಗುಡಿ, ಮೆಜೆಸ್ಟಿಕ್, ಶಿವಾಜಿನಗರ, ಜೆ. ಪಿ. ನಗರ, ವಿಜಯನಗರ, ದೀಪಾಂಜಲಿ ನಗರ, ಕೋರಮಂಗಲ, ಮಾಗಡಿ ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮಳೆಯಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ