ಕರ್ನಾಟಕದಲ್ಲಿ ಬುಧವಾರವೂ ಗುಣಮುಖರಾದವರ ಸಂಖ್ಯೆಯೇ ಹೆಚ್ಚು.. ಆದರೆ ಇಳಿಯದ ಸಾವಿನ ಸಂಖ್ಯೆ

ಬೆಂಗಳೂರು:ಕರ್ನಾಟಕದಲ್ಲಿಬುಧವಾರ 26,811 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ. ಇದೇ ಸಮಯದಲ್ಲಿ ಚೇತರಿಸಿಕೊಂಡು 40,741 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,99,784 ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಬುಧವಾರ 530 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ 26,929 ಜನ ಮೃತಪಟ್ಟಿದ್ದಾರೆ.ಇದುವರೆಗೆ 20,62,910 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈಗ 4,09,924 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಹೊಸದಾಗಿ 6433 ಜನರಿಗೆ ಸೋಂಕು ತಗುಲಿದ್ದು, 24 ಗಂಟೆಯಲ್ಲಿ 285 ಜನ ಮೃತಪಟ್ಟಿದ್ದಾರೆ, . ಇವತ್ತು 18,342 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 2,07,357 ಸಕ್ರಿಯ ಪ್ರಕರಣಗಳಿವೆ.
ಕರ್ನಾಟಕದಲ್ಲಿ ಕೊರೊನಾ ಸೋಂಕು ಕೊಂಚ ಇಳಿಕೆ ಕಂಡಿರುವ ಹೊತ್ತಲ್ಲೇ ರಾಜ್ಯ ಸರ್ಕಾರ ಕೆಲವು ಲಾಕ್ ಡೌನ್ ನಿಯಮವನ್ನು ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಪೂರ್ವ ಸಿದ್ಧತೆ/ರಸ್ತೆ ನಿರ್ಮಾಣ ಚಟುವಟಿಕೆಗೆ ಸಂಬಂಧಿಸಿದ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು, ಇದೀಗ ಕೋರ್ಟ್ ಕಾರ್ಯನಿರ್ವಹಣೆ ದಿನಗಳಲ್ಲಿ ವಕೀಲರು, ಪ್ಯಾರಾ ಲೀಗಲ್ ಸಿಬ್ಬಂದಿ ಸಂಚಾರಕ್ಕೆ ಅವಕಾಶ ನೀಡಿದೆ. ಐಡಿ ಕಾರ್ಡ್ ತೋರಿಸಿ ಓಡಾಡುವುದಕ್ಕೆ ಅವಕಾಶ ನೀಡಲಾಗಿದೆ.
ಜಿಲ್ಲಾವಾರು ಮಾಹಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

26-05-2021 HMB Kannada

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement