ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖದತ್ತ, ಆದರೆ ಇಳಿಯದ ಸಾವಿನ ಸಂಖ್ಯೆ

ನವ ದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,08,921 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,08,921 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,71,57,795 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4,157 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3,11,388 ಕ್ಕೆ ಏರಿಕಯಾಗಿದೆ.
ಕಳೆದ 24 ಗಂಟೆಯಲ್ಲಿ 2,95,955 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಈವರೆಗೆ 2,43,50,816 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದು, ಸದ್ಯ ದೇಶದಲ್ಲಿ 24,95,591 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement