ಮೈಸೂರು ಮೇಯರ್ ಪಾಲಿಕೆ ಸದಸ್ಯತ್ವ ರದ್ದುಗೊಳಿಸಿದ ಹೈಕೋರ್ಟ್‌

ಮೈಸೂರು: ಚುನಾವಣೆ ಸಂದರ್ಭದಲ್ಲಿ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆ ಮೈಸೂರು ಮಹಾನಗರ ಪಾಲಿಕೆಯ 36 ನೇ ವಾರ್ಡ್ ಸದಸ್ಯೆ ಹಾಗೂ ಹಾಲಿ ಮೇಯರ್‌ ರುಕ್ಮಿಣಿ ಮಾದೇಗೌಡಗೆ ಸಂಕಷ್ಟ ಎದುರಾಗಿದ್ದು, ಅವರ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಅವರು ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುವವರೆಗೂ ಮೇಯರ್ ಗೆ ಅಧಿಕಾರ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗಲು ರುಕ್ಮಿಣಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಪಾಲಿಕೆ ಸದಸ್ಯತ್ವ ರದ್ದಾಗಿರುವುದರಿಂದ ಮೇಯರ್ ಸ್ಥಾನಕ್ಕೂ ಕಂಟಕ ಎದುರಾಗಿದ್ದು, ಹೈ ಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುವವರೆಗೂ ಮೇಯರ್ ಗೆ ಅಧಿಕಾರ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗಲು ರುಕ್ಮಿಣಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪರಾಜಿತ ಅಭ್ಯರ್ಥಿ ರಜನಿ ಅಣ್ಣಯ್ಯಗೆ ಗೆಲುವು ಎಂದು ತೀರ್ಮಾನ ಮಾಡಲು ಸಾಧ್ಯವಿಲ್ಲ, ನೇರವಾಗಿ ಮತ್ತೆ ಚುನಾವಣೆ ಹೋಗಬೇಕೆಂದು ಹೈಕೋರ್ಟ್ ತೀರ್ಪು ನೀಡಿದೆ.

ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement