ಮಹತ್ವದ ನಿರ್ಧಾರ.. ಜಿಂದಾಲ್‌ಗೆ ಕೊಟ್ಟಿದ್ದ 3667 ಎಕರೆ ಜಮೀನು ಹಿಂಪಡೆಯಲು ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಬಳ್ಳಾರಿ ಜಿಲ್ಲರಯಲ್ಲಿ ಜಿಂದಾಲ್ ಕಂಪನಿಗೆ ಮಂಜೂರು ಮಾಡಿದ್ದ ಜಮೀನನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬಳ್ಳಾರಿಯ ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿಯನ್ನು ಮಾರಾಟ ಮಾಡಲು ನಿರ್ಧರಿಸಿ ಇದಕ್ಕೆ ಮೂಂಜೂರಿ ನೀಡಲಾಗಿತ್ತು. ಆದರೆ ಇದಕ್ಕೆ ಪಕ್ಷದಲ್ಲೇ ಅನೇಕ ಶಾಸಕರು ವಿರೋಧ ವ್ಯಕ್ತಪಡಿಸಿದ್ದರಿಂದ ಸರ್ಕಾರ ಭೂಮಿ ಹಿಂಪಡೆಯುವ ನಿರ್ಧಾರಕ್ಕೆ ಬಂದಿದೆ.
ಈ ಸಂಸ್ಥೆಯಿಂದ ರಾಜ್ಯ ಸರ್ಕಾರಕ್ಕೆ 1078 ಕೋಟಿ ರೂ.ಗಳ ರಾಜಧನ ಬರಬೇಕಾಗಿದೆ ಎಂದು ತಿಳಿದುಬಂದಿದೆ, ಈ ಕುರಿತು ಹೈಕೋರ್ಟ್ , ಸುಪ್ರೀಂಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿಯನ್ನು ರಾಜ್ಯ ಸರ್ಕಾರು ಕೆಲವು ತಿಂಗಳುಗಳ ಹಿಂದಷ್ಟೇ ಮಂಜೂರು ಮಾಡಲಾಗಿತ್ತು. ಈ ಹಿಂದೆ ಜೆಡಿಎಸ್‌ ಸರ್ಕಾರಾಧಿಕಾರದಲ್ಲಿದ್ದಾಗ ಇದೇ ನಿರ್ಧಾರ ಕೈಗೊಂಡಾಗ ಈಗ ಆಡಳಿತ ಪಕ್ಷವಾಗಿರುವ ಅಂದಿನ ಪ್ರತಿಪಕ್ಷವಾಗಿದ್ದ ಬಿಜೆಪಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು ಹಾಗೂ ಧರನಿ ನಡೆಸಸಿತ್ತು. ಈಗ ಅಧಿಕಾರಕ್ಕೆ ಬಂದ ನಂತರದಲ್ಲಿ ತಾನೇ ವಿರೋಧಿಸಿದ್ದಕ್ಕೆ ಒಪ್ಪಿಗೆ ನೀಡಿದ್ದಕ್ಕೆ ಪಕ್ಷದಲ್ಲೇ ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿ ಸರ್ಕಾರದ ಮುಜುಗರಕ್ಕೆ ಕಾರಣವಾಗಿತ್ತು. ಈಗ ಮುಜುಗರದಿಂದ ತಪ್ಪಿಸಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್‌ಗೆ ನೀಡಿದ ಜಮೀನನ್ನು ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement