ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರು ಆರೋಪಿಗಳ ಬಂಧನ:ಬೊಮ್ಮಾಯಿ

ಬೆಂಗಳೂರು : ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಪೊಲೀಸರು ಈ ಪ್ರಕರಣವನ್ನು ಬೇಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದಾರೆ. ಅದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದರು.
ಅಪರಾಧ ಎಸಗಿದವರು ಈಶಾನ್ಯ ರಾಜ್ಯಗಳಿಂದ ಬಂದವರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದರು. ವೈರಲ್ ಆದ ವಿಡಿಯೋ ಆಧಾರವಾಗಿಟ್ಟುಕೊಂಡು  ಬೆಂಗಳೂರು ಪೊಲೀಸರು ವಿಚಾರಣೆ ಆರಂಭಿಸಿದರು. ಈ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ.  ಪ್ರಕರಣದಲ್ಲಿ ನಾಲ್ವರು ಯುವಕರು ಮತ್ತು ಇಬ್ಬರು ಮಹಿಳೆಯರು ಭಾಗಿಯಾಗಿದ್ದಾರೆ. ಅವರು ನೀಡಿರುವ ಹೇಳಿಕೆ ಪ್ರಕಾರ ಇನ್ನೂ ಕೆಲ ಆರೋಪಿಗಳು ಕೇರಳದಲ್ಲಿ ಇದ್ದಾರೆ.  ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು  ಪ್ರಕರಣ ದಾಖಲಾಗಿದೆ.  ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಈ ಪ್ರಕರಣವನ್ನು  ಮೇಲುಸ್ತುವಾರಿ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement