ಬೆಂಗಳೂರು : ಜೂನ್ ಅಂತ್ಯದ ವರೆಗೂ ಕೋವಿಡ್-19 ಮಾರ್ಗಸೂಚಿಗಳನ್ನು ಮುಂದುವರೆಸಬೇಕು ಎಂದು ಕೇಂದ್ರ ಗೃಹ ಸಚಿವಾಲಯದಿಂದ ಬಂದಿರುವ ಆದೇಶದ ಪಾಲನೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ಸಭೆ ನಡೆಸಿ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಶುಕ್ರವಾರ ಸಂಜೆ 6 ಗಂಟೆಗೆ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ಉಸ್ತುವಾರಿ ಹೊಣೆ ಇರುವಸಚಿವರುಗಳು ಹಾಗು ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಡಿಸಿಎಂ ಅಶ್ವತ್ಥ ನಾರಾಯಣ, ಸಚಿವರಾದ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಆರ್.ಅಶೋಕ್, ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ದೇಶದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಜೂನ್ ಅಂತ್ಯದವರೆಗೂ ಕೋವಿಡ್-19 ಮಾರ್ಗಸೂಚಿ ಮುಂದುವರೆಸುವಂತೆ ಎಲ್ಲ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.
ಈ ಹಿನ್ನಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ. ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ.ಸದ್ಯ ಲಾಕ್‌ಡೌನ್ ಜೂನ್ 7 ರವರೆಗೂ ಲಾಕ್‌ಡೌನ್ ಜಾರಿಯಲ್ಲಿದೆ.
ಲಾಕ್‌ಡೌನ್ ನಂತರ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದರೂ ಸಾವಿನ ಸಂಖ್ಯೆ ಕಡಿಮೆಯಾಗದ ಕಾರಣ ಮಾರ್ಗಸೂಚಿ ಮುಂದುವರೆಸಬೇಕು ಎನ್ನುವ ಸೂಚನೆ ಬಂದಿರುವ ಕುರಿತು ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ. ನಂತರ ಮತ್ತೆ ಜೂನ್ ಅಂತ್ಯದ ವರೆಗೂ ಲಾಕ್‌ಡೌನ್ ವಿಸ್ತರಣೆಯಾಗುತ್ತದೆಯಾ ಅಥವಾ ಕಠಿಣ ನಿಯಮ, ಮಾರ್ಗಸೂಚಿ ಜಾರಿ ಮಾಡುವ ತೀರ್ಮಾನ ಕೈಗೊಳ್ಳಲಾಗುತ್ತದೆಯಾ ಎಂಬುದು ನಿರ್ಧಾರವಾಗುವ ಸಾಧ್ಯತೆಯಿದೆ.
ಇದರ ಜೊತೆ ಬೆಡ್, ಆಕ್ಸಿಜನ್ ಸಮಸ್ಯೆ, ಔಷಧಿ ಪೂರೈಕೆ, ಐಸಿಯು, ವೆಂಟಿಲೇಟರ್ ಬೇಡಿಕೆ, ಬಳಕೆ, ಲಾಕ್‌ಡೌನ್ ನಂತರದ ಸ್ಥಿತಿಗತಿ ಕುರಿತು ಸಭೆಯಲ್ಲಿ ಮಾಹಿತಿ ಪಡೆಯಲಿದ್ದಾರೆ.
ಕೇಂದ್ರ ಸರ್ಕಾರವು ಪ್ರಕರನ ಹೆಚ್ಚಿರುವ ಜಿಲ್ಲೆಗಳಲ್ಲಿ ಮೈಕ್ರೋ ಹಾಗೂ ಲೋಕಲ್ ಕಂಟೈನ್ಮೆಂಟ್ ಝೋನ್ ಸ್ಥಾಪಿಸಬೇಕು ಎಂದು ಸೂಚನೆ ನೀಡಿದ್ದು ಈ ಕುರಿತು ಸಹ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಲಾಕ್‌ಡೌನ್ ನಂತರ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದರೂ ಸಕ್ರಿಯ ಕೇಸ್ ಕಡಿಮೆಯಾಗದ ಕಾರಣ ಮಾರ್ಗಸೂಚಿ ಮುಂದುವರೆಸಬೇಕು ಎನ್ನುವ ಸೂಚನೆ ಬಂದಿರುವ ಕುರಿತು ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ