ಕರ್ನಾಟಕದಲ್ಲಿ ಹೊಸ ಸೋಂಕಿತರಿಗಿಂತ ಎರಡೂವರೆ ಪಟ್ಟು ಗುಣಮುಖ..ಪಾಸಿಟಿವಿಟಿ ದರ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 22,823 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 52,253 ಚೇತರಿಕೆಯಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಶುಕ್ರವಾರ ಬಿಡುಗಡೆಯಾದವರ ಸಂಖ್ಯೆ ಹೊಸ ಸೋಂಕಿತರಿಗಿಂತ ಎರಡು ಪಟ್ಟು ಹೆಚ್ಚಾಗಿದೆ.
ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 2546821 ಕ್ಕೆ ಏರಿಕೆಯಾಗಿದೆ, ಸೋಂಕಿಗೆ ಕಳೆದ 24 ಗಂಟೆಯಲ್ಲಿ 401 ಮೃತಪಟ್ಟಿದ್ದಾರೆ, ಈ ಮೂಲಕ ಸಾವಿನ ಸಂಖ್ಯೆ 27,806 ಕ್ಕೆ ಏರಿಕೆಯಾಗಿದೆ.,ರಾಜ್ಯದ ಪಾಸಿಟಿವಿಟಿ ದರ 16.42%ಕ್ಕೆ ಬಂದಿದೆ.
ಬೆಂಗಳೂರಿನಲ್ಲಿ ಶುಕ್ರವಾರ 5736 ಪ್ರಕರಣ ಪತ್ತೆಯಾಗಿದ್ದು 31,237 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯಾದ್ಯಂತ 1,38,983 ಟೆಸ್ಟ್ ಮಾಡಲಾಗಿದ್ದು,. ಪಾಸಿಟಿವಿಟಿ ದರ ಶೇಕಡ 16.4 ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಅನೇಕ ದಿನಗಳ ನಂತರ 4 ಲಕ್ಷಕ್ಕಿಂತ ಕಡಿಮೆಯಾಗಿದೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 372373 ಕ್ಕೆ ಇಳಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಎಲ್ಲ ಜಿಲ್ಲೆಗಳ ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

28-05-2021 HMB Kannada

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement