ಕೊರೊನಾದಿಂದ ಪತ್ರಕರ್ತ ತಿಪ್ಪನಗೌಡ ಪಾಟೀಲ ನಿಧನ

ಕೊಪ್ಪಳ: ಹೊಸದಿಗಂತ ಪತ್ರಿಕೆಯ ಕೊಪ್ಪಳ ಜಿಲ್ಲಾ ವರದಿಗಾರರಾಗಿದ್ದ ಪತ್ರಕರ್ತ ತಿಪ್ಪನಗೌಡ ಮಾಲೀಪಾಟೀಲ (40) ಅವರು ಕೋವಿಡ್ -19 ಸೋಂಕಿನಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಸಹೋದರ, ಸಹೋದರಿಯರು, ಅಪಾರ ಬಂದು ಬಳಗ ಇದ್ದಾರೆ. ಕಳೆದ ಹತ್ತು ದಿನಗಳಿಂದ ನಗರದ  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯದಲ್ಲಿ ಚೇತರಿಕೆ ಉಂಟಾಗಿತ್ತು. ಆದರೆ ಗುರುವಾರ ಏಕಾಏಕಿ ಏರುಪೇರಾಗಿ  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರ ಹಲವು ವರ್ಷಗಳಿಂದ ಹೊಸದಿಗಂತ ಪತ್ರಿಕೆಯ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಅವರು ೧೦  ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಅತ್ಯಂತ ಸ್ನೇಹ ಜೀವಿಯಾಗಿದ್ದ ಅವರ ಅಕಾಲಿಕ ನಿಧನಕ್ಕೆ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಶುಕ್ರವಾರ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಸುರೇಶ, ಇಲಾಖೆಯ ಸಿಬ್ಬಂದಿ ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement