ಚಂಡಮಾರುತದ ಪರಿಶೀಲನಾ ಸಭೆ: ಪಿಎಂ ಮೋದಿ, ಬಂಗಾಳ ರಾಜ್ಯಪಾಲ ಸಿಎಂ ಮಮತಾಗೆ 30 ನಿಮಿಷ ಕಾಯುತ್ತಿದ್ದರು:ಮೂಲಗಳು

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಯಾಸ್ ಚಂಡಮಾರುತದ ಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರೊಂದಿಗೆ ಪರಿಶೀಲನಾ ಸಭೆ ನಡೆಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 30 ನಿಮಿಷ ತಡವಾಗಿ ಆಗಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ವರದಿ ಪ್ರಕಾರ,ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿಗಳು 30 ನಿಮಿಷ ತಡವಾಗಿ ಆಗಮಿಸಿ, ಚಂಡಮಾರುತದ ಹಾನಿಗೆ ಸಂಬಂಧಿಸಿದ ಪೇಪರುಗಳನ್ನು ಪ್ರಧಾನಿ ಮೋದಿಗೆ ಹಸ್ತಾಂತರಿಸಿದರು ಮತ್ತು ಇತರ ಸಭೆಗಳಿಗೆ ತೆರಳಿದರು.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಧಂಕರ್ ಈ ಬಗ್ಗೆ ಟ್ವೀಟ್‌ ಮಾಡಿ, ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳು ಪ್ರಧಾನಮಂತ್ರಿಗಳ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರೆ ಅದು ರಾಜ್ಯ ಮತ್ತು ಅದರ ಜನರ ಹಿತಾಸಕ್ತಿಗಳಿಗೆ ಪೂರಕವಾಗಿರುತ್ತಿತ್ತು. ಸಂಘರ್ಷದ ನಿಲುವು ರಾಜ್ಯ ಅಥವಾ ಪ್ರಜಾಪ್ರಭುತ್ವದ ಹಿತಾಸಕ್ತಿಗಳನ್ನು ಧಕ್ಕೆಯಾಗಲಿದೆ. ಮುಖ್ಯಮಂತ್ರಿಗಳು ಸಿಎಂ ಮತ್ತು ಅಧಿಕಾರಿಗಳು ಭಾಗವಹಿಸದಿರುವುದು ಸಂವಿಧಾನ ಅಥವಾ ಕಾನೂನಿನ ನಿಯಮದೊಂದಿಗೆ ಹೊಂದದುವುದಿಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬ್ಯಾನರ್ಜಿ ಅವರು ಸಭೆಯ ಬಗ್ಗೆ ನನಗೆ ಸಮಯಕ್ಕೆ ತಿಳಿದಿಲ್ಲ ಎಂದು ತನ್ನನ್ನು ಸಮರ್ಥಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿ ಅವರನ್ನು ಪ್ರತ್ಯೇಕವಾಗಿ ಭೇಟಿಯಾದರು ಮತ್ತು ಪರಿಸ್ಥಿತಿಯ ಬಗ್ಗೆ ವಿವರಿಸಿದರು ಎಂದು ಹೇಳಿದ್ದಾರೆ. ಆಗ ಕೋಣೆಯಲ್ಲಿ ಬೇರೆ ಯಾರೂ ಇರಲಿಲ್ಲ. ಅವರು ರಾಜ್ಯ ಸರ್ಕಾರದ ಚಂಡಮಾರುತ ಮೌಲ್ಯಮಾಪನ ವರದಿಯನ್ನು ಪ್ರಧಾನಿಗೆ ಹಸ್ತಾಂತರಿಸಿದರು ಮತ್ತು ಕೇಂದ್ರದಿಂದ 20,000 ಕೋಟಿ ರೂ.ನೆರವು ಕೇಳಿದರು ಎಂದು ತಿಳಿಸಲಾಗಿದೆ.
ಅದರ ನಂತರ, ಅವರು ತಮ್ಮ ಕಾರ್ಯಯೋಜನೆಯ ಪ್ರಕಾರ ಪಶ್ಚಿಮ ಬಂಗಾಳದ ದಿಘಾದಲ್ಲಿ ಪರಿಹಾರ ಮತ್ತು ಪುನಃಸ್ಥಾಪನೆ ಕಾರ್ಯಗಳನ್ನು ಪರಿಶೀಲಿಸಲು ಮುಖ್ಯ ಕಾರ್ಯದರ್ಶಿಯೊಂದಿಗೆ ತೆರಳಿದರು.
ಪಶ್ಚಿಮ ಮದಿನಿಪುರ ಜಿಲ್ಲೆಯ ಕಲೈಕುಂಡದಲ್ಲಿ ಶುಕ್ರವಾರ ಮಧ್ಯಾಹ್ನ 2: 30 ರಿಂದ 3: 30 ರ ನಡುವೆ ಪ್ರಧಾನಿ ಮತ್ತು ಮುಖ್ಯಮಂತ್ರಿ ನಡುವಿನ ಸಭೆ ನಿಗದಿಯಾಗಿತ್ತು.
ಮೂಲಗಳ ಪ್ರಕಾರ, ಇಂದು ರಾಜ್ಯ ಆಡಳಿತದೊಂದಿಗೆ ನಿಗದಿಯಾಗಿದ್ದ ಚಂಡಮಾರುತ ಪರಿಶೀಲನಾ ಸಭೆಗೆ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿಯನ್ನು ಆಹ್ವಾನಿಸುವ ಪಿಎಂಒ ನಿರ್ಧಾರದಿಂದ ಮಮತಾ ಬ್ಯಾನರ್ಜಿ ಅಸಮಾಧಾನಗೊಂಡಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಹೇಳಿದೆ.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement