ಭಾರತದಲ್ಲಿ ಕೊರೊನಾ ಹೊಸ ಸೋಂಕು ಇಳಿಕೆ ಲಕ್ಷಣ ಗೋಚರ..!

ನವ ದೆಹಲಿ: ಭಾರತದಲ್ಲಿ ಕೊರೊನಾ 2ನೇ ಅಲೆ ಇಳಿಯುತ್ತಿರುವ ಲಕ್ಷಣಗಳು ಕಂಡು ಬರುತ್ತಿದೆ. ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ 1,86,364 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 44 ದಿನಗಳ ಬಳಿಕ ದೈನಂದಿನ ಕೊರೋನಾ ಪ್ರಕರಣ ಭಾರೀ ಇಳಿಕೆಯಾಗಿದೆ. ಭಾರತದಲ್ಲಿ ಚೇತರಿಕೆ ಪ್ರಮಾಣವು ಶೇಕಡಾ 90.34 ಕ್ಕೆ ಏರಿದೆ. ದೈನಂದಿನ ಕೇಸ್ ಪಾಸಿಟಿವಿಟಿ ದರವು ಶೇಕಡಾ 10 ಕ್ಕಿಂತ ಕಡಿಮೆ (9%) ಉಳಿದಿದೆ ಎಂದು ಸಚಿವಾಲಯ ಹೇಳಿದೆ, ಸಾಪ್ತಾಹಿಕ ಸಕಾರಾತ್ಮಕ ದರವು ಶೇಕಡಾ 10.42 ಕ್ಕೆ ಇಳಿದಿದೆ.
ಇದೇ ಅವಧಿಯಲ್ಲಿ 3,847 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆಯೂ 4 ಸಾವಿರಕ್ಕಿಂತ ಕಡಿಮೆಯಾಗಿದೆ. ಸಾವಿನ ಸಂಖ್ಯೆ ಒಟ್ಟು 3,18,895ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,75,55,457ಕ್ಕೆ ಏರಿದೆ.
ಕಳೆದ 24 ಗಂಟೆಗಳಲ್ಲಿ 2,59,459 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,48,93,410ಕ್ಕೆ ತಲುಪಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,43,152ಕ್ಕೆ ಇಳಿದಿದೆ.

ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ಅಗ್ರ ಐದು ರಾಜ್ಯಗಳಲ್ಲಿ ತಮಿಳುನಾಡು 33,361 ಪ್ರಕರಣಗಳು, ನಂತರದ ಸ್ಥಾನದಲ್ಲಿ ಕರ್ನಾಟಕ 24,214 ಪ್ರಕರಣಗಳು, ಕೇರಳದಲ್ಲಿ 24,166 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 21,273 ಪ್ರಕರಣಗಳು ಮತ್ತು ಆಂಧ್ರಪ್ರದೇಶವು 16,167 ಪ್ರಕರಣಗಳನ್ನು ದಾಖಲಿಸಿದೆ.
ಭಾರತದಲ್ಲಿ ಒಂದೇ ದಿನ 20,70,508 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೆ ಒಟ್ಟು 33,90,39,861 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ಪ್ರಕಾರ ಈವರೆಗೆ ಒಟ್ಟಾರೆ 20,57,20,660 ಮಂದಿಗೆ ಲಸಿಕೆಯನ್ನು ನೀಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಬಿಎಸ್‌ಇ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸ್ಟಂಪ್ಡ್‌ ಔಟ್‌ ಮಾಡಿದ ಬ್ರೋಕರ್‌ : ವೀಕ್ಷಿಸಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement