ಮಾಜಿ ಸಚಿವ ಸಿ.ಎಂ. ಉದಾಸಿ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಹಾನಗಲ್ ವಿಧಾನಸಭೆ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಸಿ.ಎಂ. ಉದಾಸಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ನಿರಂತರವಾಗಿ ವೈದ್ಯರ ಆರೈಕೆಯಲ್ಲಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 77 ವರ್ಷದ ಉದಾಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಉದಾಸಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಪುತ್ರ ಶಿವಕುಮಾರ್ ಉದಾಸಿ, ಅನಾರೋಗ್ಯದ ಕಾರಣ ತಂದೆಯವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸುಧಾರಣೆಗಾಗಿ ನಮ್ಮೆಲ್ಲರ ಪ್ರಾರ್ಥನೆ ಅವರೊಂದಿಗೆ ಇರಲಿ ಎಂದು ಹೇಳಿದ್ದಾರೆ.

https://twitter.com/shivkumarudasi/status/1398271109540159490

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement