ಥಾಣೆ: ಕಟ್ಟಡಕ್ಕೆ ಅಳವಡಿಸಲಾಗಿದ್ದ ಸ್ಲ್ಯಾಬ್ ಕುಸಿದು ಬಿದ್ದು ಏಳು ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ನಗರದಲ್ಲಿ ನಡೆದಿದೆ.
ನೆಹರು ಚೌಕಾದಲ್ಲಿರುವ ಐದಂತಸ್ತಿನ ಕಟ್ಟಡದಲ್ಲಿ ಅಳವಡಿಸಲಾಗಿದ್ದ ಐದು ಸ್ಲ್ಯಾಬ್ ಶುಕ್ರವಾರ ರಾತ್ರಿ ಏಕಾಏಕಿ ಕುಸಿದುಬಿದ್ದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು, ಒಬ್ಬ ಯುವಕ ಸೇರಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟವರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ಧನ ನೀಡುವುದಾಗಿ ಮಹಾರಾಷ್ಟ್ರ ಸಚಿವ ಏಕಾಂತ ಶಿಂಧೆ ಪ್ರಕಟಿಸಿದ್ದಾರೆ. 26 ವರ್ಷ ಹಳೆಯದಾದ ಕಟ್ಟಡದಲ್ಲಿ 29 ಫ್ಲಾಟ್ಗಳಿವೆ. ಘಟನೆಯಲ್ಲಿ ಅದೆ ಕಟ್ಟಡದಲ್ಲಿ ವಾಸಿಸುತ್ತಿದ್ದ ಎರಡು ಕುಟುಂಬಗಳ ಏಳು ಮಂದಿ ಮೃತಪಟ್ಟಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ