ಬೆಂಗಳೂರು: ಕರ್ನಾಟಕ ಸರಕಾರಕ್ಕೆ ಕೇಂದ್ರದಿಂದ ಬರಬೇಕಾಗಿರುವ ಜಿಎಸ್‍ಟಿ ಪರಿಹಾರ ನಷ್ಟದ ಬಾಕಿ ಮೊತ್ತ 11 ಸಾವಿರ ಕೋಟಿ ರೂ.ಗಳಷ್ಟು ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಜಿಎಸ್‌ಟಿ ಮಂಡಳಿಯ ರಾಜ್ಯ ಪ್ರತಿನಿಧಿ ಹಾಗೂ ಗೃಹ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.
ಶುಕ್ರವಾರ ನಡೆದ ಜಿಎಸ್‌ಟಿ ಮಂಡಳಿಯ 43ನೆ ಸಭೆಯಲ್ಲಿ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡು ಬಸವರಾಜ ಬೊಮ್ಮಾಯಿಯವರು ಈ ಮನವಿ ಮಾಡಿದರು.
2021-22ನೆ ಸಾಲಿನ ಜಿಎಸ್ಟಿ ಪರಿಹಾರದ ನಷ್ಟದ ಹಣವನ್ನು ಕೇಂದ್ರ ಸರಕಾರವೇ ಸಾಲ ಪಡೆದು ರಾಜ್ಯಕ್ಕೆ ನೀಡಬೇಕು. 2020- 21ನೇ ಸಾಲಿನಲ್ಲಿ ರಾಜ್ಯಕ್ಕೆ ಬರಬೇಕಾಗಿರುವ 11 ಸಾವಿರ ಕೋಟಿ ರೂ.ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಜಿಎಸ್ಟಿ ಪರಿಹಾರ ಸೆಸ್‍ನಲ್ಲಿಯೂ ಬಾಕಿ ಉಳಿದಿರುವ ಹಣವನ್ನು ರಾಜ್ಯಕ್ಕೆ ಬಿಡುಗಡೆ ಮಾಡಬೇಕು. ಜಿಎಸ್ಟಿ ನಷ್ಟ ಪರಿಹಾರ ಒದಗಿಸುವ ಸೌಲಭ್ಯ 2021- 2022ಕ್ಕೆ ಮುಕ್ತಾಯಗೊಳ್ಳಲಿದೆ. ಆದರೆ, 2021- 2022ರ ನಂತರವೂ ಜಿಎಸ್’ಟಿ ನಷ್ಟ ಪರಿಹಾರ ಸೌಲಭ್ಯವನ್ನು ಮುಂದುವರಿಸುವ ಕುರಿತು ಚರ್ಚೆ ನಡೆಯಬೇಕು ಎಂದು ಒತ್ತಾಯ ಮಾಡಿದರು.


ನಿಮ್ಮ ಕಾಮೆಂಟ್ ಬರೆಯಿರಿ