ಕರ್ನಾಟಕದಲ್ಲಿ 20 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 20,628 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 25,67,449 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಶನಿವಾರ 42,444 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 21,89,064 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಈಗ 3,50,066 ಸಕ್ರಿಯ ಪ್ರಕರಣಗಳು ಕುಸಿತ ಕಂಡಿದೆ.ಇದೇ ಸಮಯದಲ್ಲಿ 492 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 28,298 ಜನ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ 278 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದೇವೇಳೆ 4889 ಜನರಿಗೆ ಸೋಂಕು ತಗುಲಿದೆ. 1,64,182 ಸಕ್ರಿಯ ಪ್ರಕರಣಗಳಿವೆ. ಇವತ್ತು ಬೆಂಗಳೂರಿನಲ್ಲಿ 21,126 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

29-05-2021 HMB Kannada

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

ನಿಮ್ಮ ಕಾಮೆಂಟ್ ಬರೆಯಿರಿ

advertisement