ಜನ ಸಹಕರಿಸಿದರೆ ಜೂ.7ರ ನಂತರ ಲಾಕ್‍ಡೌನ್ ವಿಸ್ತರಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ:ಸಿಎಂ

ಬೆಂಗಳೂರು: ಜನ ಅಗತ್ಯ ಸಹಕಾರ ನೀಡಿದರೆ ಮಾತ್ರ ಜೂನ್ 7ರ ನಂತರ ಲಾಕ್‍ಡೌನ್ ಮುಂದುವರೆಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 7ರ ವರೆಗೂ ಎಂದಿನಂತೆ ಲಾಕ್‍ಡೌನ್ ಮುಂದುವರೆಯಲಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ. ಜೂ.7ರ ನಂತರ ಪರಿಸ್ಥಿತಿ ಅವಲೋಕಿಸಿ ಲಾಕ್‍ಡೌನ್ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದರು.
ಜನ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಜೂನ್ 7ರ ನಂತರ ಲಾಕ್‍ಡೌನ್ ವಿಸ್ತರಣೆಯ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಜನರು ಲಾಕ್‍ಡೌನ್ ಸಂದರ್ಭದಲ್ಲಿ ನಿಯಮಗಳನ್ನು ಪಾಲಿಸಿ ಅಗತ್ಯ ಸಹಕಾರ ನೀಡಬೇಕೆಂದು ಯಡಿಯೂರಪ್ಪ ಮನವಿ ಮಾಡಿಕೊಂಡರು.
ಜೂನ್ 7ರ ವರೆಗೂ ಕಟ್ಟುನಿಟ್ಟಿನ ಲಾಕ್‍ಡೌನ್ ನಿಯಮ ಮುಂದುವರೆಯಲಿದೆ. ಈ ಸಂದರ್ಭದಲ್ಲಿ ಜನ ಮನೆಯಲ್ಲಿಯೇ ಇದ್ದು ಕೊರೊನಾ ಹಾವಳಿ ತಪ್ಪಿಸಲು ಸಹಕರಿಸಬೇಕು. ಜನರ ಸಹಕರಿಸುವುದರ ಮೇಲೆ ಲಾಕ್‌ಡೌನ್‌ ವಿಸ್ತರಣೆ ಮಾಡಬೇಕೋ ಬೇಡವೋ ಎಂಬುದು ನಿರ್ಧಾರವಾಗುತ್ತದೆ ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement