ಹಲ್ಲೆ, ಅತ್ಯಾಚಾರ ಪ್ರಕರಣ: ಕೋರ್ಟ್‌ ಮುಂದೆ ಬಾಧಿತ ಬಾಂಗ್ಲಾ ಯುವತಿ ಹಾಜರಿಗೆ ಸಿದ್ಧತೆ

ಬೆಂಗಳೂರು: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಬಾಂಗ್ಲಾ ಯುವತಿಯನ್ನು ನ್ಯಾಯಧೀಶರ ಮುಂದೆ ಹಾಜರು ಪಡಿಸಿ ಹೇಳಿಕೆ ದಾಖಲಿಸಲು ರಾಮಮೂರ್ತಿನಗರ ಪೊಲೀಸರು ತಯಾರಿ ನಡೆಸಿದ್ದಾರೆ.
ಕೇರಳದಲ್ಲಿದ್ದ ಸಂತ್ರಸ್ತ ಯುವತಿಯನ್ನು ಶುಕ್ರವಾರ ಸಂಜೆ ಬೆಂಗಳೂರಿಗೆ ಕರೆತರಲಾಗಿದೆ. ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಸಂತ್ರಸ್ತ ಯುವತಿಯನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ. ಇದೀಗ ಅಜ್ಞಾತ ಸ್ಥಳದಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ವಸಂತನಗರದಲ್ಲಿರುವ ವಿಶೇಷ ಕೋರ್ಟ್ ಮುಂದೆ ಹಾಜರು ಪಡಿಸಲು ಪೊಲೀಸರು ತಯಾರಿಯಲ್ಲಿದ್ದಾರೆ.
ಸಂತ್ರಸ್ತ ಯುವತಿಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸಂತ್ರಸ್ತ ಯುವತಿಗೆ ಐವರು ಯುವಕರು ಹಾಗೂ ಒಬ್ಬ ಮಹಿಳೆ ವಿಕೃತ ರೀತಿಯಲ್ಲಿ ಕಿರುಕುಳ ನೀಡಿದ್ದ ವಿಡಿಯೋ ವೈರಲ್ ಆದ ಕೂಡಲೇ ರಾಷ್ಟ್ರ ಮಟ್ಟದಲ್ಲಿ ಪ್ರಕರಣ ಸದ್ದು ಮಾಡಿತ್ತು.
ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದರು. ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರ ಮೇಲೆ ಗುಂಡು ಹಾರಿಸಲಾಗಿತ್ತು.
ಐವರು ಆರೋಪಿಗಳಿಗೆ ಕೊರೊನಾ ಸೋಂಕು ದೃಢಪಡಿಸಲು ಪರೀಕ್ಷೆಗೆ ಒಳಪಡಿಸಲಾಗಿದ್ದು ಒಬ್ಬನಿಗೆ ಕೊರೊನಾ ಪಾಸಿಟಿವ್ ಇದೆ ಎನ್ನಲಾಗಿದೆ ಹೀಗಾಗಿ ಪ್ರತ್ಯೇಕ ಸೆಲ್ ನಲ್ಲಿ ಇಡಲಾಗಿದೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement