ಊದಿದ ಕಣ್ಣು, ಕೈಗಳಿಗೆ ಗಾಯ; ಡೊಮಿನಿಕಾ ಜೈಲಿನಲ್ಲಿರುವ ಮೆಹುಲ್ ಚೋಕ್ಸಿ ಮೊದಲ ಫೋಟೋ ಬಿಡುಗಡೆ

ನವ ದೆಹಲಿ: ಭಾರತದಿಂದ ತಲೆಮರೆಸಿಕೊಂಡಿದ್ದ ಪಿಎನ್​ಬಿ ಹಗರಣದ ಆರೋಪಿ, ವಜ್ರದ ಉದ್ಯಮಿ ಮೆಹುಲ್ ಚೋಕ್ಸಿ ಅವರನ್ನು ಕಳೆದ ಸೋಮವಾರ ರಾತ್ರಿ ಡೊಮಿನಿಕಾ ದ್ವೀಪದಲ್ಲಿ ಬಂಧಿಸಲಾಗಿತ್ತು. ಈಗ ಡೊಮಿನಿಕಾದಲ್ಲಿ ಮೆಹುಲ್ ಚೋಕ್ಸಿ ಜೈಲಿನಲ್ಲಿರುವ ಫೋಟೋವೊಂದು ಹೊರಬಿದ್ದಿದ್ದು, ಅವರಿಗೆ ಜೈಲಿನಲ್ಲಿ ಥಳಿಸಿ, ಹಿಂಸೆ ನೀಡಲಾಗಿದೆ ಎಂದು ಚೋಕ್ಸಿ ಪರ ವಕೀಲರು ಆರೋಪಿಸಿದ್ದಾರೆ.
ಮೆಹುಲ್ ಚೋಕ್ಸಿ ಅವರ ಫೋಟೋದಲ್ಲಿ ಅವರ ಕೈಗಳ ಮೇಲೆ ಥಳಿಸಿದ ಗಾಯಗಳಾಗಿದ್ದು, ಒಂದು ಕಣ್ಣು ಕೆಂಪಾಗಿ ಊದಿಕೊಂಡಿದೆ. ಫೋಟೋವನ್ನು ಚೋಕ್ಸಿ ಅವರ ವಕೀಲ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಜೈಲಿನಲ್ಲಿರುವ ನನ್ನ ಕಕ್ಷಿದಾರಿನಗೆ ದೈಹಿಕ ಹಿಂಸೆ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಈ ಹಿಂದೆಯೂ ಪೊಲೀಸರು ಚೋಕ್ಸಿ ಅವರನ್ನು ಥಳಿಸಿ, ಡೊಮಿನಿಕಾಗೆ ಎಳೆದುಕೊಂಡು ಹೋಗಿ, ಜೈಲಿಗೆ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಕಳೆದ ಸೋಮವಾರ ಸಂಜೆ ಆಂಟಿಗುವಾ ದ್ವೀಪದಿಂದ ನಾಪತ್ತೆಯಾಗಿದ್ದ ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ಹಗರಣದ ಪ್ರಮುಖ ಆರೋಪಿ ವಜ್ರದ ಉದ್ಯಮಿ ಮೆಹುಲ್ ಚೋಕ್ಸಿ ಕ್ಯೂಬಾಕ್ಕೆ ಪಲಾಯನ ಮಾಡುವ ಸಂದರ್ಭದಲ್ಲಿ ಡೊಮಿನಿಕಾ ದ್ವೀಪದಲ್ಲಿ ಬಂಧಿಸಲಾಗಿದೆ.
62 ವರ್ಷದ ಚೋಕ್ಸಿ, ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬಡೋಸ್‌ ಪೌರತ್ವ ಪಡೆದು ಅಲ್ಲಿ ನೆಲೆಸಿದ್ದರು. ಸೋಮವಾರ ಸಂಜೆ ಊಟಕ್ಕಾಗಿ ಮನೆಯಿಂದ ಹೊರಗೆ ಹೋದವರು ವಾಪಸ್ ಬಂದಿರಲಿಲ್ಲ. ಚೋಕ್ಸಿ ಕ್ಯೂಬಾಕ್ಕೆ ಪರಾರಿಯಾಗಿರುವ ಅನುಮಾನಗಳು ವ್ಯಕ್ತವಾಗಿದ್ದವು. ಆಂಟಿಗುವಾದಿಂದ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡಿಸುವ ಸಂಬಂಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಗಳು ಪ್ರಯತ್ನ ನಡೆಸಿರುವ ಸಂದರ್ಭದಲ್ಲಿಯೇ ಅವರು ಆಂಟಿಗುವಾದಿಂದಲೂ ಪಲಾಯನ ಮಾಡಿದ್ದರು.

ಪ್ರಮುಖ ಸುದ್ದಿ :-   ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇಜ್ರಿವಾಲಗೆ ದೆಹಲಿ ಹೈಕೋರ್ಟ್‌ ನಿಂದ ಸಿಗದ ಜಾಮೀನು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement