ಭೀಮಾ ನದಿಯಲ್ಲಿ ಕೊಚ್ಚಿಹೋದ ನಾಲ್ವರು ಮಕ್ಕಳು

ಸೋಲಾಪುರ ; ಮಹಾರಾಷ್ಟ್ರ ಗಡಿ ಭಾಗದ ಭೀಮಾ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನ ರಭಸಕ್ಕೆ ಕೊಚ್ಚಿಹೋದ ಘಟನೆ ಮಹಾರಾಷ್ಟ್ರದ ದಕ್ಷಿಣ ಸೋಲಾಪುರ ತಾಲೂಕಿನ ಲವಗಿ ಗ್ರಾಮದ ಬಳಿ ನಡೆದ ವರದಿಯಾಗಿದೆ.

ಶವಗಳಿಗಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ.
ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ (13), ವಿಠ್ಠಲ (10), ಹಾಗೂ ಶಿವಾಜಿ ತಾನವಡೆ ಎಂಬವರ ಮಕ್ಕಳಾದ ಸಮೀಕ್ಷಾ (14), ಅರ್ಪಿತಾ(13) ನೀರಿನಲ್ಲಿ ಕೊಚ್ಚಿ ಹೋದ ಮಕ್ಕಳು.
ಆರತಿ ಮೃತದೇಹ ಪತ್ತೆಯಾಗಿದೆ. ಆದರೆ ಉಳಿದ ಮೂವರ ಮೃತ ದೇಹಕ್ಕಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ.
ಹಿರಿಯರು ಕೆಲಸದಲ್ಲಿ ತೊಡಗಿದ್ದಾಗ ಮಕ್ಕಳು ಭೀಮಾ‌ ನದಿಗೆ ಸ್ನಾನಕ್ಕಾಗಿ ತೆರಳಿದ್ದರು. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿ ಹೋಗಿದ್ದಾರೆ.
ಮಹಾರಾಷ್ಟ್ರದ ಮಂದ್ರೂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೋ..| ಎರಡೂ ಕೈತೋಳುಗಳಿಲ್ಲದೆ ಡ್ರೈವಿಂಗ್‌ ಲೈಸೆನ್ಸ್‌ ಪಡೆದ ಏಷ್ಯಾದ ಮೊದಲ ಮಹಿಳೆ ಇವರು : ಕೇರಳದ ಯುವತಿಯ ಕಾರ್‌ ಚಾಲನೆಗೆ ಬೆರಗಾಗ್ತೀರಾ..!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement